ನಾಳೆಯಿಂದ ಕ್ರಿಕೆಟ್ ಪಂದ್ಯಾವಳಿ
ತುಮಕೂರು: ಚಕ್ರವರ್ತಿ ಗೆಳೆಯರ ಬಳಗದ ವತಿಯಿಂದ ನಟ ದಿ.ಪುನೀತ್ ರಾಜ್‍ಕುಮಾರ್ ನೆನಪಿಗಾಗಿ ಫೆ. 9ರಿಂದ 12ರ ವರೆಗೆ ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಟೆನ್ನಿಸ್‌ಬಾಲ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ.
ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಪಂದ್ಯಾವಳಿ ನಡೆಯಲಿದೆ. ಪ್ರಥಮ ಬಹುಮಾನವಾಗಿ ₹3 ಲಕ್ಷ ಮತ್ತು ಟ್ರೋಫಿ, ದ್ವಿತೀಯ ಸ್ಥಾನ ಪಡೆದವರಿಗೆ ₹1.50 ಲಕ್ಷ ಹಾಗೂ ಟ್ರೋಫಿ ನೀಡಲಾಗುತ್ತದೆ. ಉತ್ತಮ ಪ್ರದರ್ಶನ ನೀಡಿದ ಆಟಗಾರರಿಗೆ ವೈಯಕ್ತಿಕ ಬಹುಮಾನ ವಿತರಿಸಲಾಗುತ್ತದೆ ಎಂದು ಕನ್ನಡ ಸೇನೆಯ ಅಧ್ಯಕ್ಷ ಧನಿಯಾಕುಮಾರ್ ಇಲ್ಲಿ ಮಂಗಳವಾರ ಹೇಳಿದರು.
ರಾಜ್ಯದ ತಂಡಗಳ ಜತೆಗೆ ಆಂಧ್ರಪ್ರದೇಶ, ಛತ್ತಿಸಗಡ ರಾಜ್ಯದ ತಂಡ ಸೇರಿದಂತೆ ಒಟ್ಟು 32 ತಂಡಗಳು ಭಾಗವಹಿಸಲಿವೆ. ಚಕ್ರವರ್ತಿ ಗೆಳೆಯರ ಬಳಗದ ಪ್ರಕಾಶ್ ಮತ್ತು ತಂಡ ಪ್ರತಿ ಮೂರು ವರ್ಷಕ್ಕೊಮ್ಮೆ ಇಂತಹ ಕ್ರೀಡಾಕೂಟ ಆಯೋಜಿಸುತ್ತಿದ್ದಾರೆ. ಫೆ. 9ರಂದು ಸಂಜೆ 6 ಗಂಟೆಗೆ ರಾಜ್ಯ ಅಥ್ಲೆಟಿಕ್ ಸಂಸ್ಥೆಯ ಅಧ್ಯಕ್ಷ ಡಾ.ಜಿ.ಪರಮೇಶ್ವರ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಕ್ರೀಡಾಪಟು ಪಿ.ಎನ್.ಕೃಷ್ಣಮೂರ್ತಿ, ಚಕ್ರವರ್ತಿ ಗೆಳೆಯರ ಬಳಗದ ಪ್ರಕಾಶ್, ನೇತಾಜಿ ಶ್ರೀಧರ್, ಮಾರುತಿ, ಪ್ರಸನ್ನ, ರಂಜನ್, ಚೇತನ್, ಭರತ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.