ತುಮಕೂರು: ನಗರದ ಗ್ರೈನ್ ಮರ್ಚೆಂಟ್ಸ್ ಕೋ–ಆಪರೇಟಿವ್ ಬ್ಯಾಂಕ್ನಲ್ಲಿ (ಟಿಜಿಎಂಸಿ) ನಡೆದಿರುವ ಕೋಟ್ಯಂತರ ರೂಪಾಯಿ ಮೊತ್ತದ ಅಕ್ರಮಗಳು ಸಹಕಾರ ಸಂಘಗಳ ಉಪ ನಿಬಂಧಕರು ನಡೆಸಿದ ತನಿಖೆಯಲ್ಲಿ ದೃಢಪಟ್ಟಿವೆ.

ಅಕ್ರಮ ನಡೆಸಿ, ಬ್ಯಾಂಕ್ಗೆ ನಷ್ಟವಾಗಲು ಕಾರಣರಾಗಿರುವ ಬ್ಯಾಂಕ್ ಅಧಿಕಾರಿಗಳು, ಆಡಳಿತ ಮಂಡಳಿ ನಿರ್ದೇಶಕರಿಂದ ನಷ್ಟದ ಹಣವನ್ನು ಬಡ್ಡಿ ಸಹಿತ ವಸೂಲಿ ಮಾಡಬೇಕು. ಬ್ಯಾಂಕ್ ಮುಖ್ಯ ಕಾರ್ಯನಿರ್ವಾಹಕರು ಹಾಗೂ ಸಂಬಂಧಿಸಿದ ವ್ಯವಸ್ಥಾಪಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಸೂಕ್ತ ನಿರ್ದೇಶನ ನೀಡಬಹುದಾಗಿದೆ ಎಂದು ವರದಿಯಲ್ಲಿ ನಮೂದಿಸಿದ್ದಾರೆ.

ಸಹಕಾರ ಸಂಘಗಳ ಉಪನಿಬಂಧಕರು ತನಿಖೆ ನಡೆಸಿ 116 ಪುಟಗಳ ವರದಿಯನ್ನು ಸಹಕಾರ ಸಂಘಗಳ ನಿಬಂಧಕರಿಗೆ ಮಾರ್ಚ್ 6ರಂದು ಸಲ್ಲಿಸಿದ್ದಾರೆ.

ಟಿಜಿಎಂಸಿ ಬ್ಯಾಂಕ್ನ 12 ಶಾಖೆಗಳ 20ಕ್ಕೂ ಹೆಚ್ಚು ಖಾತೆಗಳಲ್ಲಿ ಸುಮಾರು ₹250 ಕೋಟಿಗೂ ಹೆಚ್ಚು ಮೊತ್ತದ ಅವ್ಯವಹಾರ ನಡೆದಿರುವುದು ಕಂಡುಬರುತ್ತದೆ. ಇದರಿಂದ ಬ್ಯಾಂಕ್ಗೆ ಅಪಾರ ನಷ್ಟವಾಗಿದ್ದು, ಈ ನಷ್ಟಕ್ಕೆ ಬ್ಯಾಂಕಿನ ಆಡಳಿತ ಮಂಡಳಿ, ಅಧಿಕಾರಿಗಳು, ಸಾಲದ ಉಪಸಮಿತಿ ಸಂಪೂರ್ಣ ಜವಾಬ್ದಾರಿಯಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

‘ಬ್ಯಾಂಕ್ನ 12 ಶಾಖೆಗಳ 20ಕ್ಕೂ ಹೆಚ್ಚು ಖಾತೆಗಳಿಂದ ನೂರಾರು ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ’ ಎಂದು ಬ್ಯಾಂಕ್ ಸದಸ್ಯ ಜಿ.ಎಸ್.ಬಸವರಾಜು ಅವರು ಸಹಕಾರ ಸಂಘಗಳ ನಿಬಂಧಕರು ಹಾಗೂ ಜಂಟಿ ನಿಬಂಧಕರಿಗೆ ದೂರು ಸಲ್ಲಿಸಿದ್ದರು. ಆದರೆ ಯಾವುದೇ ಕ್ರಮ ತೆಗೆದುಕೊಳ್ಳದ ಕಾರಣ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.

‘ದೂರು ದಾಖಲಿಸಿಕೊಂಡ ಲೋಕಾಯುಕ್ತರು, ಈ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸಹಕಾರ ಸಂಘಗಳ ನಿಬಂಧಕರಿಗೆ ಆದೇಶಿಸಿದ್ದರು. ನಂತರ ಸಹಕಾರ ಸಂಘಗಳ ನಿಬಂಧಕರು ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959ರ ಅಡಿ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾ ಉಪ ನಿಬಂಧಕರಿಗೆ ಆದೇಶಿಸಿದ್ದರು. ಅದರಂತೆ ತನಿಖೆ ನಡೆಸಿ ವರದಿ ನೀಡಿದ್ದು, ನಾನು ಮಾಡಿದ್ದ ಆರೋಪಗಳು ದೃಢಪಟ್ಟಿವೆ’ ಎಂದು ಬಸವರಾಜು ತಿಳಿಸಿದ್ದಾರೆ.

ಸಹಕಾರ ಸಂಘಗಳ ಕಾಯ್ದೆ 1959ರ ಕಲಂ 69ರ ಅಡಿಯಲ್ಲಿ ಅಧಿಬಾರ ಪ್ರಕರಣ ದಾಖಲಿಸುವಂತೆ ಆದೇಶಿಸಲಾಗಿದೆ. ಜತೆಗೆ ನನ್ನ ಬ್ಯಾಂಕ್ ಸದಸ್ಯತ್ವ ಮುಂದುವರಿಸಲು ನಿರ್ದೇಶಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.