ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು ಜಿಲ್ಲೆ ನನಗೆ ಹೊಸದಲ್ಲ: ಸೋಮಣ್ಣ

Published 25 ಮಾರ್ಚ್ 2024, 8:37 IST
Last Updated 25 ಮಾರ್ಚ್ 2024, 8:37 IST
ಅಕ್ಷರ ಗಾತ್ರ

ತುಮಕೂರು: ಜಿಲ್ಲೆ ನನಗೆ ಹೊಸದಲ್ಲ. ಕಳೆದ 40 ವರ್ಷಗಳಿಂದ ಒಡನಾಟ ಇಟ್ಟುಕೊಂಡಿದ್ದೇನೆ. ತುಮಕೂರು ನನ್ನ ತಾಯಿನಾಡಿನಷ್ಟೇ ಪವಿತ್ರವಾದದ್ದು ಎಂದು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿಯ ನಿಯೋಜಿತ ಅಭ್ಯರ್ಥಿ ವಿ.ಸೋಮಣ್ಣ ಹೇಳಿದರು.

ತಾಲ್ಲೂಕಿನ ಬಾಣಾವರ ಗೇಟ್‌ ಬಳಿಯ ಬಿಜೆಪಿ ಕಚೇರಿಯಲ್ಲಿ ಶನಿವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ಜೆಡಿಎಸ್‌ ಕಾರ್ಯಕರ್ತರು ಬಿಜೆಪಿಯ ಜತೆಗೆ ಕೈಜೋಡಿಸಿ ಎಲ್ಲ ಕಡೆ ಕೆಲಸ ಮಾಡುತ್ತಿದ್ದಾರೆ. ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಕೆಲಸ ಆಗಬೇಕು. ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪರವಾದ ಅಲೆಯಿದೆ. ಜಿಲ್ಲೆಯಲ್ಲಿ 2 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶಾಸಕ ಬಿ.ಸುರೇಶ್‌ಗೌಡ, ‘ಕೇವಲ ಗ್ಯಾರಂಟಿ ಯೋಜನೆಗಳಿಗೆ ಸರ್ಕಾರದ ಬೊಕ್ಕಸ ಖಾಲಿಯಾಗಿದೆ. ರಾಜ್ಯದ ಸಮಗ್ರ ಅಭಿವೃದ್ಧಿಗೆ ಎಲ್ಲಿಂದ ಹಣ ತರುತ್ತಾರೆ’ ಎಂದು ಪ್ರಶ್ನಿಸಿದರು.

ಜಗತ್ತಿನಲ್ಲಿ ನಮ್ಮ ದೇಶದ ವರ್ಚಸ್ಸು ಮತ್ತಷ್ಟು ಹೆಚ್ಚಾಗಬೇಕು. ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಎಲ್ಲರು ಶ್ರಮಿಸಬೇಕು. ಕಾರ್ಯಕರ್ತರು ಪ್ರತಿ ಮನೆಗೆ ಭೇಟಿ ನೀಡಬೇಕು. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ತಿಳಿಸುವ ಕೆಲಸ ಮಾಡಬೇಕು ಎಂದರು.

ಬಿಜೆಪಿಯ ಮುಖಂಡರಾದ ಶಂಕರ್, ವೈ.ಎಚ್‌.ಹುಚಯ್ಯ, ಶಿವಕುಮಾರ್‌, ಸಿದ್ದೇಗೌಡ, ಪಂಚೆ ರಾಮಚಂದ್ರಪ್ಪ, ನರಸಿಂಹಮೂರ್ತಿ, ಉಮೇಶ್‌ಗೌಡ, ಅಂಜಿನಪ್ಪ, ಸುಮಿತ್ರಾದೇವಿ, ರೇಣುಕಮ್ಮ ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT