ಶುಕ್ರವಾರ, ಮೇ 14, 2021
25 °C
ಕೋವಿಡ್‌– ಎಚ್ಚರಿಕೆ ಅಗತ್ಯ: ಶಾಸಕ ಪರಮೇಶ್ವರ

ಶುದ್ಧ ನೀರಿನ ಘಟಕ ಉದ್ಘಾಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊರಟಗೆರೆ: ಕೋವಿಡ್ ವ್ಯಾಪಕವಾಗಿ ಹರಡುತ್ತಿದ್ದು, ಪ್ರತಿಯೊಬ್ಬರೂ ವೈಯುಕ್ತಿಕವಾಗಿ ಎಚ್ಚರಿಕೆಯಿಂದ ಇರುವುದು ಅತ್ಯಗತ್ಯ ಎಂದು ಶಾಸಕ ಡಾ. ಜಿ.ಪರಮೇಶ್ವರ ತಿಳಿಸಿದರು.

ಪಟ್ಟಣದ ನಾಲ್ಕು ವಾರ್ಡ್‌ಗಳಲ್ಲಿ ₹1.34 ಕೋಟಿ ವೆಚ್ಚದ ಶುದ್ಧ ನೀರಿನ ಘಟಕಗಳನ್ನು ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬರೂ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕೋವಿಡ್ ನಿಯಮ ಪಾಲಿಸಲೇಬೇಕು. ಯಾರೂ ನಿರ್ಲಕ್ಷಿಸಬಾರದು ಎಂದರು.

ಸ್ಥಳೀಯ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರಿನೊಂದಿಗೆ ಮೂಲ ಸೌಕರ್ಯಗಳನ್ನು ಒದಗಿಸುವುದು ಹಾಗೂ ಪರಿಸರದಲ್ಲಿ ಸ್ವಚ್ಛತೆ ಕಾಪಾಡುವುದು ಸದ್ಯದ ಪರಿಸ್ಥಿತಿಯಲ್ಲಿ ಕೋವಿಡ್ ಸಮಸ್ಯೆಗೆ ಸಣ್ಣ ಪರಿಹಾರವಿದ್ದಂತೆ ಎಂದರು.

ಎಸ್‌ಟಿಪಿ, ಪಿಎಎಸ್‌ಟಿ ಯೋಜನೆಯಲ್ಲಿ ಹಲವು ಪರಿಶಿಷ್ಟ ಕಾಲೊನಿಗಳಲ್ಲಿ ಹೈ ಮಾಸ್ಟ್‌ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದೆ ಎಂದರು.

ಪಟ್ಟಣ ಸೇರಿದಂತೆ ಕ್ಷೇತ್ರದ 16 ಗ್ರಾಮಗಳಲ್ಲಿ ಹೇಮಾವತಿ ಕುಡಿಯುವ ನೀರಿನ ಯೋಜನೆ ತರಲಾಗಿದೆ. ಆದರೆ ಪಟ್ಟಣ ಸೇರಿದಂತೆ ಗ್ರಾಮಗಳ ಕೆರೆಗಳಿಗೆ ನೀರಿನ ಕೊರತೆ ಕಾಣುತ್ತಿದ್ದು, ಮುಂಬರುವ ದಿನದಲ್ಲಿ ಅದನ್ನು ಸರಿಪಡಿಸಿ ಎಲ್ಲ ಕೆರೆಗಳಿಗೂ ಸಾಕಷ್ಟು ನೀರು ಹರಿಸುವ ಪ್ರಯತ್ನಿಸಲಾಗುವುದು ಎಂದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಮಂಜುಳ, ಉಪಾಧ್ಯಕ್ಷೆ ಭಾರತಿ, ಮುಖ್ಯಾಧಿಕಾರಿ ಲಕ್ಷ್ಮಣ್ ಕುಮಾರ್, ಆರೋಗ್ಯ ನಿರೀಕ್ಷಕ ರೈಸ್ ಅಹಮದ್ ಸದಸ್ಯರಾದ ಎ.ಡಿ. ಬಲರಾಮಯ್ಯ, ಕೆ.ಆರ್.ಓಬಳರಾಜು, ಕೆ.ಎನ್ ಲಕ್ಷ್ಮಿನಾರಾಯಣ್, ಪ್ರದೀಪ್ ಕುಮಾರ್, ಪುಟ್ಟನರಸಯ್ಯ, ಕೆ.ಎನ್. ನಟರಾಜು, ನಾಗರಾಜು, ನಂದೀಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೆಡಿಕಲ್ ಅಶ್ವತ್ಥ್, ಅರಕೆರೆ ಶಂಕರ್, ಯುವ ಅಧ್ಯಕ್ಷ ವಿನಯ್, ಮಹಿಳಾ ಅಧ್ಯಕ್ಷೆ ಜಯಮ್ಮ, ಮುಖಂಡರಾದ ಗಣೇಶ್, ರಮೇಶ್, ತುಂಗಾ ಮಂಜುನಾಥ್, ಕಲೀಂ ಉಲ್ಲಾ, ಕೆ.ವಿ ಮಂಜುನಾಥ್ ಇದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು