ಮಂಗಳವಾರ, ಜೂನ್ 28, 2022
28 °C

ಮೀನು ಹಿಡಿಯಲು ಹೋದ ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಧುಗಿರಿ: ಕೆರೆಯಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ದೊಡ್ಡೇರಿ ಹೋಬಳಿಯ ವೀರಣ್ಣನಹಳ್ಳಿಯಲ್ಲಿ ಭಾನುವಾರ ನಡೆದಿದೆ.

ಗ್ರಾಮದ ಪುಟ್ಟಲಿಂಗಣ್ಣ (45) ಮೃತಪಟ್ಟವರು.

ಕೆರೆಯಲ್ಲಿ ಮೀನು ಹಿಡಿಯಲು ಬಲೆ ಸಮೇತ ಪುಟ್ಟಲಿಂಗಣ್ಣ, ಕೆಂಚಣ್ಣ ಹಾಗೂ ರಂಗನಾಥ ತೆರಳಿದ್ದಾರೆ. ಕೆರೆಯಲ್ಲಿ ‌ಮೀನಿನ‌ ಬಲೆ ಬಿಟ್ಟು, ಪುನಃ ಬಲೆ ತೆಗೆಯಲು ಹೋದಾಗ ಪುಟ್ಟಲಿಂಗಣ್ಣ ಕಾಲಿಗೆ ಬಲೆ ಸಿಲುಕಿಕೊಂಡು ನೀರಿನಲ್ಲಿ ಮುಳುಗಿದ್ದಾರೆ. ಈ ವಿಷಯವನ್ನು ಪತ್ನಿ ರಾಮಕ್ಕ ಅವರಿಗೆ ತಿಳಿಸಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಮೃತದೇಹವನ್ನು ಪತ್ತೆ
ಹಚ್ಚಿದ್ದಾರೆ. ಬಡವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು