ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಣಿಗಲ್‌: ಶ್ರೀಗಂಧದ ಮರ ಕಡಿದ ದುಷ್ಕರ್ಮಿಗಳು

Published 15 ಫೆಬ್ರುವರಿ 2024, 14:12 IST
Last Updated 15 ಫೆಬ್ರುವರಿ 2024, 14:12 IST
ಅಕ್ಷರ ಗಾತ್ರ

ಕುಣಿಗಲ್: ಪುರಸಭೆ ವ್ಯಾಪ್ತಿಯ ಮಲ್ಲಾಘಟ್ಟ ಸರ್ಕಾರಿ ಗೋಮಾಳದಲ್ಲಿ ಬೆಳೆದಿದ್ದ ಶ್ರೀಗಂಧದ ಮರಗಳನ್ನು ದುಷ್ಕರ್ಮಿಗಳು ಗುರುವಾರ ಕಡಿದಿದ್ದು, ಗ್ರಾಮಸ್ಥರ ಸಮಯಪ್ರಜ್ಞೆಯಿಂದಾಗಿ ಸಾಗಿಸಲಾಗದೆ ಪರಾರಿಯಾಗಿದ್ದಾರೆ.

ಪುರಸಭೆ ಎರಡನೇ ವಾರ್ಡ್ ರಾಜಣ್ಣ ಅವರ ಮನೆ ಸಮೀಪ ಬೆಳೆದಿದ್ದ ಶ್ರೀಗಂಧದ ಮರವನ್ನು ಕಡಿಯುತ್ತಿದ್ದ ಶಬ್ದ ಕೇಳಿ ಗ್ರಾಮಸ್ಥರು ಪೊಲೀಸರು ಮತ್ತು ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದಾರೆ. ಅವರು ಬರುವ ಸಮಯಕ್ಕೆ ಮರದ ತುಂಡುಗಳನ್ನು ಬಿಟ್ಟು ಕಳ್ಳರು ಪರಾರಿಯಾಗಿದ್ದಾರೆ.

ಶ್ರೀಗಂಧದ ಮರದ ತುಂಡುಗಳನ್ನು ವಶಪಡಿಸಿಕೊಂಡಿರುವ ವಲಯ ಅರಣ್ಯಾಧಿಕಾರಿ ಜಗದೀಶ್ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT