ಭಾನುವಾರ, ಫೆಬ್ರವರಿ 28, 2021
21 °C

ಮಾನಸಿಕ ಅಸ್ವಸ್ಥನಿಂದ ತಾಯಿ ಕೊಲೆ

ಪ್ರಜಾವಾಣಿವಾರ್ತೆ Updated:

ಅಕ್ಷರ ಗಾತ್ರ : | |

ಕುಣಿಗಲ್: ಮಾನಸಿಕ ಅಸ್ವಸ್ಥ ಮಗನಿಂದಲೆ ತಾಯಿ ಕೊಲೆಯಾಗಿರುವ ಘಟನೆ ಹುಲಿಯೂರುದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯ ಸಂತೆಮಾವತ್ತೂರು ಹಂಗರಹಳ್ಳಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಕೊಲೆಯಾದವರನ್ನು ಜಯಮ್ಮ (55) ಎಂದು ಗುರುತಿಸಲಾಗಿದೆ. ಈಕೆಯ ಮಗ ರಾಜ ಕಳೆದ ಕೆಲದಿನಗಳಿಂದಲೂ ಕ್ಷುಲಕ ಕಾರಣಕ್ಕೆ ತಾಯಿಯೊಂದಿಗೆ ಜಗಳವಾಡುತ್ತಿದ್ದು, ಶುಕ್ರವಾರ ರಾತ್ರಿ ಜಯಮ್ಮ ಮಲಗಿದ್ದ ಸಮಯದಲ್ಲಿ ಮನೆಯಲ್ಲಿ ಮಸಾಲೆ ಅರಿಯಲು ಬಳಸುವ ಗುಂಡುಕಲ್ಲನ್ನು ಎತ್ತಿ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ.

ಜಯಮ್ಮ ಅರಚಿದ್ದರಿಂದ ನೆರೆಹೊರೆಯವರು ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಅರೋಪಿಯನ್ನು ಗ್ರಾಮಸ್ಥರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಡಿವೈಎಸ್‌ಪಿ ಜಗದೀಶ್, ಸಿಪಿಐ ಗುರುಪ್ರಸಾದ್‌ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅರೋಪಿ ರಾಜ ಈ ಹಿಂದೆ ಗ್ರಾಮದ ಯಶವಂತ್ ಎಂಬ ಬಾಲಕನೊಬ್ಬನನ್ನು ಕೊಲೆ ಮಾಡಿದ್ದು, ತಾಯಿಯೇ ಮಾನಸಿಕ ಅಸ್ವಸ್ಥತೆಯ ಆಧಾರದ ಮೇಲೆ ಬಿಡಿಸಿಕೊಂಡು ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು