ಭಾನುವಾರ, ಜುಲೈ 3, 2022
27 °C
ಕಾರ್ಮಿಕ, ರೈತ ವಿರೋಧಿ ಕಾಯ್ದೆ ರದ್ದುಗೊಳಿಸಲು ಆಗ್ರಹ

ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಯತ್ನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ರೈತ ಮತ್ತು ಜನ ವಿರೋಧಿಯಾದ ಕಾಯ್ದೆ ತಿದ್ದುಪಡಿಗಳನ್ನು ವಾಪಸ್ ಪಡೆಯಬೇಕು ಮತ್ತು ಸರ್ಕಾರಿ ಸ್ವಾಮ್ಯದ ಉದ್ದಿಮೆಗಳ ಖಾಸಗೀಕರಣ ನಿಲ್ಲಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಸಿಐಟಿಯು ಕಾರ್ಯಕರ್ತರನ್ನು ಶುಕ್ರವಾರ ಪೊಲೀಸರು ಬಂಧಿಸಿದರು.

ನಗರದ ಕಾರ್ಮಿಕ ಇಲಾಖೆ ಅಧಿಕಾರಿ ಕಚೇರಿ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿಗೆ ಕಾರ್ಯಕರ್ತರು ಮೆರವಣಿಗೆಯಲ್ಲಿ ತೆರಳಿದರು. ಅಲ್ಲಿ ಬಹಿರಂಗ ಸಭೆ ನಡೆಸಿದರು. ರೈತ ವಿರೋಧಿ ತಿದ್ದುಪಡಿ ಕಾಯ್ದೆಗಳ ವಾಪಸ್‌ಗೆ ಆಗ್ರಹಿಸಿದರು. ನಂತರ ಕಚೇರಿ ಮುತ್ತಿಗೆಗೆ ಮುಂದಾದರು.

ಉದ್ಯೋಗ ಖಾತರಿ ಯೋಜನೆಯಡಿ ವಾರ್ಷಿಕ 200 ದಿನಗಳ ಕಾಲ ಕೆಲಸ ನೀಡಬೇಕು. ದಿನಕ್ಕೆ ₹ 700 ಕೂಲಿ ನೀಡಬೇಕು. ನಗರ ಪ್ರದೇಶಗಳಿಗೂ ಯೋಜನೆ ವಿಸ್ತರಿಸಬೇಕು. ಎಲ್ಲ ಅಸಂಘಟಿತ ಕಾರ್ಮಿಕರಿಗೂ ಸಾಮಾಜಿಕ ರಕ್ಷಣಾ ಯೋಜನೆಗಳನ್ನು ವಿಸ್ತರಿಸಬೇಕು. ಉಚಿತ ಸಾರ್ವತ್ರಿಕ ಆರೋಗ್ಯ ರಕ್ಷಣೆ ಜಾರಿಗೊಳಿಸಬೇಕು. ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೇ ಪಿಂಚಣಿಯನ್ನು ಮತ್ತೆ ಜಾರಿಗೆ ತರಬೇಕು. ಬಡವರಿಗೆ ಪ್ರತಿ ತಿಂಗಳು 10 ಕೆ.ಜಿ ಆಹಾರ ಧಾನ್ಯಗಳನ್ನು ಉಚಿತವಾಗಿ ನೀಡಬೇಕು. ನೂತನ ಶಿಕ್ಷಣ ನೀತಿಯನ್ನು ಹಿಂದಕ್ಕೆ ಪಡೆಯಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಕಮಲಾ ಮಾತನಾಡಿ, ‘ಕೇಂದ್ರ ಸರ್ಕಾರ ಸ್ಕೀಂ ನೌಕರರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಸರ್ಕಾರದ ಜನವಿರೋಧಿಯಾಗಿದೆ’ ಎಂದು ಟೀಕಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ಸೈಯದ್ ಮುಜೀಬ್, ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕ ಅಜ್ಜಪ್ಪ, ಅಂಗನವಾಡಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಗುಲ್ಜಾರ್, ಗ್ರಾಮ ಪಂಚಾಯಿತಿ ನೌಕರರ ಸಂಘದ ಅಧ್ಯಕ್ಷ ಎನ್.ಕೆ.ಸುಬ್ರಹ್ಮಣ್ಯ, ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಅಧ್ಯಕ್ಷ ಬಿ. ಉಮೇಶ್, ಎ.ಲೋಕೆಶ್ ಮಾತನಾಡಿದರು.

ಪ್ರತಿಭಟನೆಯಲ್ಲಿ ಷಣ್ಮಖಪ್ಪ, ಜಿಲ್ಲಾ ಬೀಡಿ ಕಾರ್ಮಿಕರ ಸಂಘದ ನಿಸಾರ್ ಅಹಮದ್, ಹಮಾಲಿ ಕಾರ್ಮಿಕರ ಸಂಘದ ರಾಮಾಂಜಿನಿ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಭಾಗಿಯಾಗಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು