ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತೆಂಗು ಬೆಳೆಗಾರರಿಗೆ ಅನ್ಯಾಯವೆಸಗಿದ ರಾಜ್ಯ ಸರ್ಕಾರ: ಶಾಸಕ ಎಂ.ಟಿ.ಕೃಷ್ಣಪ್ಪ

Published 3 ಮಾರ್ಚ್ 2024, 14:11 IST
Last Updated 3 ಮಾರ್ಚ್ 2024, 14:11 IST
ಅಕ್ಷರ ಗಾತ್ರ

ತುರುವೇಕೆರೆ: ಕೊಬ್ಬರಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸದೆ ರಾಜ್ಯದ ತೆಂಗು ಬೆಳೆಗಾರರನ್ನು ಕಡೆಗಣಿಸಿರುವ ಕಾಂಗ್ರೆಸ್‌ಗೆ ಮುಂಬರುವ ಲೋಕಸಬಾ ಚುನಾವಣೆಯಲ್ಲಿ ಜನರು ಸರಿಯಾದ ಪಾಠ ಕಲಿಸಬೇಕು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು.

ಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 13 ಜಿಲ್ಲೆಗಳಲ್ಲಿ ತೆಂಗು ಬೆಳೆಯುವ ರೈತರಿಗೆ ಸರ್ಕಾರ ಅನ್ಯಾಯ ಮಾಡಿದೆ. ಕೊಬ್ಬರಿಗೆ ಕನಿಷ್ಠ ₹15 ಸಾವಿರವಾದರೂ ಬೆಂಬಲ ಬೆಲೆ ಘೋಷಿಸಬೇಕು ಎಂದು ಪ್ರತಿಭಟನೆ, ಚಳವಳಿ, ಹೋರಾಟ ಮಾಡಿದರೂ ಬಜೆಟ್‌ನಲ್ಲಿ ಕೊಬ್ಬರಿ ಬೆಳೆಗಾರರ ಪರವಾಗಿ ಯಾವುದೇ ಘೋಷಣೆ ಮಾಡದೆ ರೈತ ವಿರೋದಿ ಸರ್ಕಾರವಾಗಿದೆ ಎಂದು ಟೀಕಿಸಿದರು.

ರಾಜ್ಯ ಸರ್ಕಾರ ಕಾಂಗ್ರೆಸ್‌ ಶಾಸಕರಿಗೆ ಒಂದು ಅನುದಾನ, ಉಳಿದ ಪಕ್ಷದ ಶಾಸಕರಿಗೆ ಒಂದು ಅನುದಾನ ನೀಡುವ ಮೂಲಕ ತಾರತಮ್ಯ ಮಾಡುತ್ತಿದೆ ಎಂದು ದೂರಿದರು.

ಗ್ಯಾರಂಟಿಗಳಿಂದ ರಾಜ್ಯದ ಜನತೆ ಬೆಸತ್ತಿದ್ದು ಅವುಗಳಿಗೆ ಮಾನ್ಯತೆ ಇಲ್ಲವಾಗಿದೆ. ಕಾಂಗ್ರೆಸ್ ಸರ್ಕಾರಕ್ಕೆ ಚುನಾವಣೆ ವೇಳೆ ಬುದ್ಧಿ ಕಲಿಸಬೇಕು. ಇಲ್ಲವಾದರೆ ರಾಜ್ಯದ ರೈತರಿಗೆ ಉಳಿಗಾಲವಿಲ್ಲ ಎಂದು ಹೇಳಿದರು.

‘ಹೇಮಾವತಿ ಸಂಪರ್ಕ ಕಾಲುವೆ ಯೋಜನೆಯ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ಆದರೆ ತಾಲ್ಲೂಕಿನ ಪಾಲಿನ ನೀರಿಗೆ ಅನ್ಯಾಯವಾದರೆ ಕೈಕಟ್ಟಿ ಕೂರುವುದಿಲ್ಲ’ ಎಂದು ಪ್ರತಿಕ್ರಿಯಿಸಿದರು.

ಗೋಷ್ಠಿಯಲ್ಲಿ ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ದೇವರಾಜು, ಮುಖಂಡರಾದ ಪರಮೇಶ್, ವಿಜೇಂದ್ರಕುಮಾರ್, ವೆಂಕಟಾಪುರ ಯೋಗೀಶ್, ಮಂಗಿಗುಪ್ಪೆ ಬಸವರಾಜು, ರಂಗಸ್ವಾಮಿ, ಪುಟ್ಟರಾಜು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT