ಮಂಗಳವಾರ, ಅಕ್ಟೋಬರ್ 26, 2021
23 °C

ಮದ್ಯದಂಗಡಿಗೆ ಗ್ರಾಮಸ್ಥರ ವಿರೋಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಡಿಗೇನಹಳ್ಳಿ: ಐಡಿಹಳ್ಳಿ ಹೋಬಳಿಯ ಚಿಕ್ಕದಾಳವಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿರುವ ವಿಠಲಪುರ ಗ್ರಾಮದಲ್ಲಿ ಮದ್ಯದಂಗಡಿ ತೆರೆಯಬಾರದು ಎಂದು ಆಗ್ರಹಿಸಿ ಗ್ರಾಮಸ್ಥರು ಸೋಮವಾರ ಪ್ರತಿಭಟನೆ ನಡೆಸಿದರು.

ವಿಠಲಾಪುರ ಗ್ರಾಮ ಪಕ್ಕದ ಸೀಮಾಂಧ್ರಕ್ಕೆ ಹೊಂದಿಕೊಂಡಿದ್ದು ಸೀಮಾಂಧ್ರದ ಪೆನುಗೊಂಡ, ಹಿಂದೂಪುರ, ಮಡಕಶಿರಾ ತಾಲ್ಲೂಕಿನಿಂದ ನೂರಾರು ಮದ್ಯವ್ಯಸನಿಗಳು ಬಂದು ಗ್ರಾಮದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಸುತ್ತಾರೆ. ಇದರಿಂದ ಗ್ರಾಮದಲ್ಲಿರುವ ಮಹಿಳೆಯರು ಮಕ್ಕಳಿಗೆ ತೊಂದರೆಯಾಗಲಿದೆ. ಸ್ಥಳೀಯ ಗ್ರಾಮ ಪಂಚಾಯಿತಿ, ಸಂಬಂಧಪಟ್ಟ ಇಲಾಖೆ ಪರವಾನಗಿ ನೀಡಬಾರದು ಎಂದು ಅವರು ಒತ್ತಾಯಿಸಿದರು.

ಇಲ್ಲಿನ ಜನರು ಕೂಲಿಯನ್ನು ನಂಬಿ ಜೀವನ ಮಾಡುತ್ತಿದ್ದಾರೆ. ಇಲ್ಲಿ ಈಗ ಮದ್ಯದಂಗಡಿ ತೆರೆದರೆ ಕುಟುಂಬಗಳು ಬೀದಿಗೆ ಬೀಳುವ ಸಂಭವವೇ ಹೆಚ್ಚಾಗಿದೆ. ಪರವಾನಗಿ ನೀಡಿದರೆ ಉಗ್ರ ಹೋರಾಟವನ್ನು ಮಾಡುವುದಾಗಿ ಗ್ರಾಮಸ್ಥರಾದ ಸುಬ್ರಹ್ಮಣ್ಯ, ಗಿರೀಶ, ಮಧುಸೂದನ್, ರವಿ, ಗಂಗಾಧರ್, ಮನೋಹರ ನರಸಿಂಹಮೂರ್ತಿ, ರಾಮಾಂಜಿ, ರತ್ನಮ್ಮ, ಪ್ರಮೀಳಾ, ಕಲಾವತಿ, ಲಕ್ಷ್ಮಮ್ಮ, ಪ್ರಭಾಕರ್‌ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.