ತುಮಕೂರು: ಕಾಂಗ್ರೆಸ್‍ನವರು ಭಾರತವನ್ನು ಬಾಂಗ್ಲಾದೇಶ, ಅಫ್ಘಾನಿಸ್ತಾನ ಮಾಡುತ್ತೇವೆ ಎಂದು ದೇಶ ಒಡೆಯುವ ಮಾತನಾಡುತ್ತಿರುವುದು ದುರದೃಷ್ಟಕರ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಹೇಳಿದರು.

ನಗರದಲ್ಲಿ ಸೋಮವಾರ ಡಿ.ದೇವರಾಜ ಅರಸು ಹಿಂದುಳಿದ ವೇದಿಕೆ ಹಾಗೂ ಕರುನಾಡ ಮಿತ್ರ ಫೌಂಡೇಷನ್ ವತಿಯಿಂದ ಹಮ್ಮಿಕೊಂಡಿದ್ದ ಶ್ರೀಕೃಷ್ಣ ಜಯಂತಿ, ದೇವರಾಜ ಅರಸು, ನಾರಾಯಣ ಗುರು ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಸುವರ್ಣಯುಗ. ದೇಶದ ಅಭಿವೃದ್ಧಿಗೆ ಮೋದಿ ಶ್ರಮಿಸುತ್ತಿದ್ದಾರೆ. ರಾಜ್ಯಪಾಲರು ಸಂವಿಧಾನದಡಿ ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದಾರೆ. ತನಿಖೆ ಬಗ್ಗೆ ಕಾಂಗ್ರೆಸ್‍ನವರಿಗೆ ಆತಂಕವೇಕೆ ಎಂದು ಪ್ರಶ್ನಿಸಿದರು.

ವಿಧಾನ ಪರಿಷತ್ತಿನ ಮಾಜಿ ಸದಸ್ಯ ಡಾ.ಎಂ.ಆರ್.ಹುಲಿನಾಯ್ಕರ್, ಕರುನಾಡ ಮಿತ್ರ ಫೌಂಡೇಷನ್ ಅಧ್ಯಕ್ಷ ಜೆ.ಜಗದೀಶ್, ನಿವೃತ್ತ ತಹಶೀಲ್ದಾರ್ ಜಿ.ಎಂ.ಸಣ್ಣಮುದ್ದಯ್ಯ, ಕಾಡುಗೊಲ್ಲರ ಸಂಘದ ಅಧ್ಯಕ್ಷ ಕರಿಯಪ್ಪ, ಮುಖಂಡರಾದ ಟಿ.ಆರ್.ಸದಾಶಿವಯ್ಯ, ಕೆ.ವೇದಮೂರ್ತಿ, ಮಲ್ಲಿಕಾರ್ಜುನ್, ಪುಟ್ಟರಾಜು, ಟಿ.ಜಿ.ನರಸಿಂಹರಾಜು, ಮರಿತಿಮ್ಮಯ್ಯ, ಡಾ.ರಾಜಣ್ಣ, ಸತ್ಯಮಂಗಲ ಜಗದೀಶ್, ಓ.ಎಲ್.ಪುರುಷೋತ್ತಮ್, ಕೊಪ್ಪಲ್ ನಾಗರಾಜು ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.