ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಬ್ಬಿ: ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಕಳ್ಳತನ

Published 26 ಡಿಸೆಂಬರ್ 2023, 8:11 IST
Last Updated 26 ಡಿಸೆಂಬರ್ 2023, 8:11 IST
ಅಕ್ಷರ ಗಾತ್ರ

ಗುಬ್ಬಿ: ಕಸಬಾ ಹೋಬಳಿ ಜಿ.ಹೊಸಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಗೆ ಭಾನುವಾರ ತಡರಾತ್ರಿ ಬೀಗಮುರಿದು ಒಳನುಗ್ಗಿರುವ ಕಳ್ಳರು ಕಚೇರಿಯಲ್ಲಿರುವ ಬೀರು ಒಡೆದು ಲೆಕ್ಕಪತ್ರದ ಪುಸ್ತಕ ಹರಿದು ಹಾಕಿದ್ದಾರೆ. ಗ್ರಾಮ ಪಂಚಾಯಿತಿಯ ಸಮೀಪದಲ್ಲಿಯೇ ಬೇರೆ ಎರಡು ಕಡೆ ಕಳ್ಳತನ ಮಾಡಿದ್ದಾರೆ.

ಈ ಸರಣಿ ಕಳ್ಳತನದಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಪಂಚಾಯಿತಿ ಕಚೇರಿಯ ಬಗ್ಗೆ ಎಲ್ಲಾ ತಿಳಿದುಕೊಂಡಿರುವವರೇ ಕಳ್ಳತನ ಮಾಡಿರುವ ಸಾಧ್ಯತೆ ಇದೆ. ಕೆಲವು ದಾಖಲೆಗಳನ್ನು ಹರಿದು ಹಾಕಲಾಗಿದೆ. ಯಾವ ಉದ್ದೇಶದಿಂದ ಮಾಡಿದ್ದಾರೆ ಎಂದು ತಿಳಿದುಬಂದಿಲ್ಲ. ಕ್ರಮ ಕೈಗೊಳ್ಳುವಂತೆ ಪೊಲೀಸ್ ಠಾಣೆಗೆ ದೂರು ನೀಡಲಾಗುವುದು ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT