ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರಟಗೆರೆ: ಇಬ್ಬರು ಸರಗಳ್ಳರ ಬಂಧನ

Published 15 ಮಾರ್ಚ್ 2024, 15:32 IST
Last Updated 15 ಮಾರ್ಚ್ 2024, 15:32 IST
ಅಕ್ಷರ ಗಾತ್ರ

ಕೊರಟಗೆರೆ: ತಾಲ್ಲೂಕಿನ ಕೋಳಾಲ ವ್ಯಾಪ್ತಿಯಲ್ಲಿ ಸರಗಳ್ಳತನ ಮಾಡಿದ್ದ ನೆಲಮಂಗಲ ತಾಲ್ಲೂಕಿನ ಆದಿಹೊಸಹಳ್ಳಿ ಗ್ರಾಮದ ಚೇತನ್ (23), ಗಂಗರಾಜು (23) ಎಂಬುವರನ್ನು ಕೋಳಾಲ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ಮಾರ್ಚ್ 12ರಂದು ಒಂದೇ ದಿನ ಕೋಳಾಲ ಹೋಬಳಿ ವ್ಯಾಪ್ತಿಯ ಪಾತಗಾನಹಳ್ಳಿ, ರಾವುತನಹಳ್ಳಿ ಗ್ರಾಮದ ಬಳಿ ಒಂಟಿ ಮಹಿಳೆಯರು ಓಡಾಡುತ್ತಿದ್ದ ವೇಳೆ ಸರಗಳ್ಳತನ ಮಾಡಿ ಪರಾರಿಯಾಗಿದ್ದರು.

ಸರ ಕಳೆದುಕೊಂಡ ಮಹಿಳೆಯರು ನೀಡಿದ ದೂರಿನ ಮೇರೆಗೆ ಕಾರ್ಯಪ್ರವೃತ್ತರಾದ ಕೋಳಾಲ ಪಿಎಸ್ಐ ರೇಣುಕಾ ಯಾದವ್ ಹಾಗೂ ಸಿಬ್ಬಂದಿ ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ. ಬಂಧಿತರಿಂದ 52 ಗ್ರಾಂ ಚಿನ್ನದ ಎರಡು ಸರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೋಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT