ಶನಿವಾರ, ಅಕ್ಟೋಬರ್ 24, 2020
26 °C
ಕಾಂಗ್ರೆಸ್‌ನಿಂದ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರಿಗೆ ಪುಷ್ಪ ನಮನ ಕಾರ್ಯಕ್ರಮ

ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಚಿತ್ರವೇ ಇಲ್ಲ; ಜಾಲತಾಣದಲ್ಲಿ ಟೀಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಪ್ರಯುಕ್ತ ಹಮ್ಮಿಕೊಂಡಿದ್ದ ಪುಷ್ಪ ನಮನ ಕಾರ್ಯಕ್ರಮದ ಫ್ಲೆಕ್ಸ್‌ನಲ್ಲಿ ಗಾಂಧಿ ಅವರ ಮತ್ತು ಶಾಸ್ತ್ರಿ ಅವರ ಭಾವಚಿತ್ರಗಳೇ ಇಲ್ಲ! ಈ ವಿಚಾರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗೆ ಗುರಿಯಾಗಿದೆ. 

ಹಲವರು ಈ ಫ್ಲೆಕ್ಸ್ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಪ್ರಕಟಿಸಿ ಕಾಂಗ್ರೆಸ್ ಪಕ್ಷದ ನಡೆಗೆ ವ್ಯಂಗ್ಯವಾಡಿದ್ದಾರೆ. ಈ ಫ್ಲೆಕ್ಸ್ ಟ್ರೋಲ್‌ಗೂ ಗುರಿಯಾಗಿದೆ. 

ಈ ಫ್ಲೆಕ್ಸ್‌ನಲ್ಲಿ ಗಾಂಧಿ ಮತ್ತು ಶಾಸ್ತ್ರಿ ಅವರ ಭಾವಚಿತ್ರ ಹುಡುಕಿಕೊಟ್ಟವರಿಗೆ ಬಹುಮಾನ ಎಂದು ಕಾಂಗ್ರೆಸ್ ಪಕ್ಷದ ಕಾಲೆಳೆದಿದ್ದಾರೆ. 


ಟ್ರೋಲ್‌ಗೊಳಗಾದ ಫ್ಲೆಕ್ಸ್

ಫ್ಲೆಕ್ಸ್‌ನಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸಾಸಲು ಸತೀಶ್ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಚಿತ್ರಗಳೇ ಎದ್ದು ಕಾಣುತ್ತವೆ. ಸಾಸಲು ಸತೀಶ್ ಕಾರ್ಯಾಧ್ಯಕ್ಷರಾಗಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು