ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಾ: ಹಾಸಿಗೆಗಳಿಗಿಲ್ಲ ಕೊರತೆ

ತಾಯಿ, ಮಗು ಆಸ್ಪತ್ರೆ ಕೋವಿಡ್ ಆಸ್ಪತ್ರೆಯಾಗಿ ಮಾರ್ಪಾಡು
Last Updated 29 ಏಪ್ರಿಲ್ 2021, 5:43 IST
ಅಕ್ಷರ ಗಾತ್ರ

ಶಿರಾ: ಕೋವಿಡ್‌ ರೋಗಿಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ತಾಯಿ ಮತ್ತು ಮಗು ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯಾಗಿ ಮಾರ್ಪಡಿಸಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.

ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಖಾಸಗಿ ವೈದ್ಯರ ಸಭೆ ನಡೆಸಿ ಮಾತನಾಡಿದರು.

ಕೊರೊನಾ ನಿಯಂತ್ರಣಕ್ಕಾಗಿ ಎಲ್ಲ ರೀತಿಯ ಮುಂಜಾಗ್ರತೆ ತೆಗೆದುಕೊಳ್ಳಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ‌ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಯಾವುದೇ ರೀತಿಯ ಆತಂಕ ಪಡುವುದು ಬೇಡ ಎಂದರು.

ಶಿರಾ ಆಸ್ಪತ್ರೆಯಲ್ಲಿ ಬೆಡ್ ಕೊರತೆ ಇಲ್ಲ. ಆಮ್ಲಜನಕ ಸೇರಿದಂತೆ ಎಲ್ಲ ರೀತಿಯ ಸೌಲಭ್ಯ ಒದಗಿಸಲಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕೋವಿಡ್ ಕೇರ್ ಸೆಂಟರ್ ಹಾಗೂ ಅಂಬೇಡ್ಕರ್ ಭವನದಲ್ಲಿ ಡೇ ಕೇರ್ ಸೆಂಟರ್ ಪ್ರಾರಂಭಿಸಲಾಗಿದೆ ಎಂದರು.

ಖಾಸಗಿ ವೈದ್ಯರು ಇಂತಹ ಸಂಕಷ್ಟದ ಸಮಯದಲ್ಲಿ ಸರ್ಕಾರದ ಜೊತೆ ಕೈಜೋಡಿಸಿ ಆಸ್ಪತ್ರೆಗಳನ್ನು ಪ್ರಾರಂಭಿಸಿ ರೋಗಿಗಳಿಗೆ ಚಿಕಿತ್ಸೆ ನೀಡಬೇಕು ಎಂದರು.

ಶಾಸಕ ಡಾ‌.ಸಿ.ಎಂ.ರಾಜೇಶ್ ಗೌಡ, ಉಪವಿಭಾಗಧಿಕಾರಿ ಸೋಮಪ್ಪ ಕಡಕೋಳ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಗೇಂದ್ರಪ್ಪ, ತಹಶೀಲ್ದಾರ್ ಎಂ.ಮಮತ, ಡಿವೈಎಸ್ ಪಿ ಕುಮಾರಪ್ಪ, ನಗರಸಭೆ ಪೌರಾಯುಕ್ತರು ಪರಮೇಶ್ವರಪ್ಪ, ತಾಲ್ಲೂಕು ವೈದ್ಯರ ಸಂಘದ ಅಧ್ಯಕ್ಷ ಡಾ.ರಾಮಕೃಷ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT