ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಾದಲ್ಲಿ ಆಕ್ಸಿಜನ್ ಕೊರತೆ ಇಲ್ಲ

Last Updated 5 ಮೇ 2021, 4:50 IST
ಅಕ್ಷರ ಗಾತ್ರ

ಶಿರಾ: ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಕ್ಸಿಜನ್‌ಗೆ ಕೊರತೆ ಇಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸುಳ್ಳು ಸುದ್ದಿಗಳಿಂದ ಯಾರು ಆತಂಕ ಪಡಬೇಡಿ ಎಂದು ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಹೇಳಿದರು.

ಚಾಮರಾಜನಗರ ಆಸ್ಪತ್ರೆಯಲ್ಲಿ ಸಂಭವಿಸಿದ ದುರ್ಘಟನೆಯ ಮಾದರಿಯಲ್ಲಿ ಶಿರಾ ಆಸ್ಪತ್ರೆಯಲ್ಲಿ ಸಹ ಆಕ್ಸಿಜನ್ ಕೊರತೆಯಿಂದ ದುರ್ಘಟನೆ ಸಂಭವಿಸಬಹುದು ಈ ಬಗ್ಗೆ ಎಚ್ಚರ ವಹಿಸುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಹರಿದಾಡಿತ್ತು. ಈ ಹಿನ್ನಲೆಯಲ್ಲಿ ಮಂಗಳವಾರ ನಗರದ ಸಾರ್ವಜನಿಕ ಆಸ್ಪತ್ರೆಗೆ ಶಾಸಕರು ಭೇಟಿ ನೀಡಿ ಆಕ್ಸಿಜನ್ ಸಿಲಿಂಡರ್ ಪರಿಶೀಲಿಸಿದರು.

ಆಸ್ಪತ್ರೆಯಲ್ಲಿ 50 ಆಕ್ಸಿಜನ್ ಬೆಡ್‌ಗಳಿದ್ದು ಅದರಲ್ಲಿ 39 ರೋಗಿಗಳಿಗೆ ಆಕ್ಸಿಜನ್ ನೀಡಲಾಗುತ್ತಿದೆ. ಆಸ್ಪತ್ರೆಯಲ್ಲಿ ಈಗ 32 ತುಂಬಿರುವ ಆಕ್ಸಿಜನ್ ಸಿಲಿಂಡರ್‌ಗಳಿದ್ದು ಒಂದು ದಿನಕ್ಕೆ ಯಾವುದೇ ತೊಂದರೆಯಾಗುವುದಿಲ್ಲ. ಶೇ 75ರಷ್ಟು ಸಿಲಿಂಡರ್ ದಾಸ್ತಾನು ಮಾಡಿಕೊಳ್ಳಲಾಗುವುದು ಎಂದರು.

ಸದ್ಯ ಆಸ್ಪತ್ರೆಯಲ್ಲಿ 50 ಆಕ್ಸಿಜನ್ ಹಾಸಿಗೆಗಳಿದ್ದು, ಇನ್ನು 50 ಹಾಸಿಗೆಗಳಿಗೆ ಸ್ವಂತ ಖರ್ಚಿನಲ್ಲಿ ಆಕ್ಸಿಜನ್ ಸಂಪರ್ಕ ಕೊಡಿಸಲು ಖಾಸಗಿ ಕಂಪನಿಗೆ ಜವಾಬ್ದಾರಿ ನೀಡಿದ್ದು, ಎರಡು ದಿನಗಳಲ್ಲಿ ನೂರು ಹಾಸಿಗೆಗೂ ಆಕ್ಸಿಜನ್ ಸಂಪರ್ಕ ದೊರೆಯುವುದು ಎಂದರು.

ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸುಳ್ಳು ಸುದ್ದಿಗಳಿಗೆ ಯಾರು ಕಿವಿಗೊಡಬೇಡಿ. ಆಸ್ಪತ್ರೆಗೆ ಬಂದು ಪರಿಶೀಲಿಸಿ ಸಮಸ್ಯೆ ಇದ್ದರೆ ಗಮನಕ್ಕೆ ತನ್ನಿ ಪರಿಹರಿಸಲಾಗುವುದು ಎಂದರು.

ತಹಶೀಲ್ದಾರ್ ಎಂ.ಮಮತ, ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಶ್ರೀನಾಥ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT