ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಿರಾ | ಪೊಲೀಸರೆಂದು ಹೇಳಿಕೊಂಡು ಮಾಂಗಲ್ಯ ಸರ ಕದ್ದೊಯ್ದ ಕಳ್ಳರು

Published 22 ಜೂನ್ 2024, 14:06 IST
Last Updated 22 ಜೂನ್ 2024, 14:06 IST
ಅಕ್ಷರ ಗಾತ್ರ

ಶಿರಾ: ನಗರದ ತಾಯಿ ಮತ್ತು ಮಗು ಆಸ್ಪತ್ರೆ ಮುಂಭಾಗ ಇಬ್ಬರು ಅಪರಿಚಿತ ವ್ಯಕ್ತಿಗಳು ಪೊಲೀಸರೆಂದು ಹೇಳಿಕೊಂಡು ಮಹಿಳೆಯ ಗಮನವನ್ನು ಬೇರೆಡೆ ಸೆಳೆದು ₹1.50 ಲಕ್ಷ ಮೌಲ್ಯದ 48 ಗ್ರಾಂ ತೂಕದ ಮಾಂಗಲ್ಯ ಸರ ಕಿತ್ತು ಪರಾರಿಯಾಗಿದ್ದಾರೆ.

ತಾಲ್ಲೂಕಿನ ಕಡವಿಗೆರೆ ಗ್ರಾಮದ ಅಶ್ವಥಮ್ಮ ಆಸ್ಪತ್ರೆಗೆ ಬಂದಿದ್ದರು. ತಾಯಿ ಮತ್ತು ಮಗು ಆಸ್ಪತ್ರೆಯ ಮುಂದೆ ಹೋಗುತ್ತಿದ್ದಾಗ ಪೊಲೀಸರು ಎಂದು ಹೇಳಿಕೊಂಡ ಇಬ್ಬರು ಅಪರಿಚಿತರು ‘ಮುಂದೆ ಗಲಾಟೆ ನಡೆಯುತ್ತಿದೆ. ನಿಮ್ಮ ಮಾಂಗಲ್ಯ ಸರ ಜೋಪಾನ. ತೆಗೆದು ಬ್ಯಾಗ್‌ನಲ್ಲಿ ಇಟ್ಟುಕೊಳ್ಳಿ. ತೆಗೆದುಕೊಡಿ ಪೇಪರ್‌ನಲ್ಲಿ ಸುತ್ತಿಕೊಡುತ್ತೇವೆ’ ಎಂದಿದ್ದಾರೆ. ಮಹಿಳೆಯ ಗಮನವನ್ನು ಬೇರೆ ಕಡೆ ಸೆಳೆದು ಪೇಪರ್‌ನಲ್ಲಿ ಸರದ ಬದಲು ಕಲ್ಲು ಸುತ್ತಿಕೊಟ್ಟು ಹೋಗಿದ್ದಾರೆ. ಸ್ವಲ್ಪ ಸಮಯದ ನಂತರ ಮಹಿಳೆ ಪೇಪರ್‌ ತೆಗೆದು ನೋಡಿದಾಗ ಮೋಸ ಹೋಗಿರುವುದು ಗೊತ್ತಾಗಿದೆ.

ನಗರ ಠಾಣೆಗೆ ದೂರು ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT