ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಡುವ ಸಮುದಾಯವಲ್ಲ: ಬೃಹತ್ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ

Last Updated 1 ಡಿಸೆಂಬರ್ 2021, 7:17 IST
ಅಕ್ಷರ ಗಾತ್ರ

ತುಮಕೂರು:ವೀರಶೈವ, ಲಿಂಗಾಯತ ಸಮಾಜ ನೀಡುವ ಕೈಗಳೇ ಹೊರತು, ಬೇಡುವ ಸಮುದಾಯವಲ್ಲ. ಸಮಾಜ ತಮ್ಮ ಶಕ್ತಿ ಮೀರಿ ದೇಣಿಗೆ ಸಂಗ್ರಹಿಸಿ ಐದು ಗರ್ಭಗುಡಿಗಳಿರುವ ದೇವಾಲಯ ಜೀರ್ಣೋದ್ಧಾರ ಮಾಡಿರುವುದೇ ಇದಕ್ಕೆ ಸಾಕ್ಷಿ ಎಂದುಎಂದು ಬೃಹತ್ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಹೇಳಿದರು.

ನಗರದ ಅರಳೇಪೇಟೆಯಲ್ಲಿ ವೀರಶೈವ ಸಮಾಜದ ವತಿಯಿಂದ ಜೀರ್ಣೋದ್ಧಾರಗೊಂಡಿರುವ ಬಸವೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದ ನಂತರ ಮಾತನಾಡಿದರು.

ರಾಜ್ಯದಲ್ಲಿ ಕೋವಿಡ್‌ ಮೂರನೇ ಅಲೆಯ ಭೀತಿ ಇದೆ. ಆದರೆ ಈಗಾಗಲೇ ಮುಖ್ಯಮಂತ್ರಿ ಲಾಕ್‍ಡೌನ್ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ದೇಶದಲ್ಲಿ 100 ಕೋಟಿಗೂ ಹೆಚ್ಚು ಜನರಿಗೆ ಲಸಿಕೆ ನೀಡಲಾಗಿದೆ. ಉಳಿದ ಜನರಿಗೂ ತ್ವರಿತಗತಿಯಲ್ಲಿ ಲಸಿಕೆ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರಮುಖವಾಗಿ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ ವಲಸೆ ಕಾರ್ಮಿಕರಿಗೆ ಲಸಿಕೆ ಪಡೆದುಕೊಳ್ಳುವಂತೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಬಿಜೆಪಿ ಮುಖಂಡ ಸೊಗಡು ಶಿವಣ್ಣ, ವೀರಶೈವ ಸಮಾಜದ ಅಧ್ಯಕ್ಷ ಟಿ.ಬಿ.ಶೇಖರ್, ಉಪಾಧ್ಯಕ್ಷ ಚಂದ್ರಮೌಳಿ, ದೇವಾಲಯ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೋರಿ ಮಂಜಣ್ಣ, ಪದಾಧಿಕಾರಿಗಳಾದ ಅತ್ತಿ ರೇಣುಕಾನಂದ, ವೀರಶೈವಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಮೋಹನ್ ಕುಮಾರ್ ಪಟೇಲ್, ವೀರಶೈವ ಬ್ಯಾಂಕ್ ಅಧ್ಯಕ್ಷ ರುದ್ರಪ್ಪ, ಉಪಾಧ್ಯಕ್ಷ ಮಲ್ಲಿಕಾರ್ಜುನಯ್ಯ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT