ಭಾನುವಾರ, 12 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಸ್ಟ್ರಾಂಗ್‌ ರೂಮ್‌ಗೆ ಬಿಗಿ ಭದ್ರತೆ

Published 28 ಏಪ್ರಿಲ್ 2024, 5:33 IST
Last Updated 28 ಏಪ್ರಿಲ್ 2024, 5:33 IST
ಅಕ್ಷರ ಗಾತ್ರ

ತುಮಕೂರು: ಲೋಕಸಭಾ ಕ್ಷೇತ್ರದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದ್ದು, ವಿದ್ಯುನ್ಮಾನ ಮತಯಂತ್ರಗಳನ್ನು ವಿಶ್ವವಿದ್ಯಾಲಯದ ವಿಜ್ಞಾನ ಕಾಲೇಜು ಹಾಗೂ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜಿನ ಸ್ಟ್ರಾಂಗ್ ರೂಮ್‌ಗಳಲ್ಲಿ ಇಡಲಾಗಿದೆ.

ಸ್ಟ್ರಾಂಗ್‌ ರೂಮ್‌ ಬಳಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಸಿಆರ್‌ಪಿಎಫ್‌ ಸಿಬ್ಬಂದಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ. ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಸಲಾಗಿದೆ. ಸ್ಟ್ರಾಂಗ್‌ ರೂಮ್‌ ಸಿಬ್ಬಂದಿ ಪಾಳಿ ಲೆಕ್ಕದಲ್ಲಿ ಕೆಲಸ ಮಾಡಲಿದ್ದಾರೆ.

ವಿಜ್ಞಾನ ಕಾಲೇಜಿನಲ್ಲಿ ತಿಪಟೂರು, ಚಿಕ್ಕನಾಯಕನಹಳ್ಳಿ, ಮಧುಗಿರಿ ಹಾಗೂ ತುರುವೇಕೆರೆ ವಿಧಾನಸಭಾ ಕ್ಷೇತ್ರ ಮತ್ತು ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ತುಮಕೂರು ನಗರ, ಗ್ರಾಮಾಂತರ, ಕೊರಟಗೆರೆ ಹಾಗೂ ಗುಬ್ಬಿ ವಿಧಾನಸಭಾ ಕ್ಷೇತ್ರಗಳ ಇವಿಎಂ ಯಂತ್ರಗಳನ್ನು ಇರಿಸಲಾಗಿದೆ.

ಜೂನ್‌ 4ರ ವರೆಗೆ ಸಿಆರ್‌ಪಿಎಫ್‌ ಸಿಬ್ಬಂದಿ ಸ್ಟ್ರಾಂಗ್‌ ರೂಮ್‌ ಜವಾಬ್ದಾರಿ ನೋಡಿಕೊಳ್ಳಲಿದ್ದಾರೆ. ಅಗತ್ಯ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT