ತಿಪಟೂರು: ಮೂರು ತಿಂಗಳಿನಿಂದ ಹಾಲಿನ ಬಟವಾಡೆ ಸ್ಥಗಿತಗೊಳಿಸಲಾಗಿದೆ. ತಕ್ಷಣ ಹಣ ಪಾವತಿಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರೈತರು ಬುಧವಾರ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ತಾಲ್ಲೂಕಿನ ನೊಣವಿನಕೆರೆ ಹೋಬಳಿ ಜಿ.ಮೇಲನಹಳ್ಳಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯನ್ನು ಮೂರು ತಿಂಗಳ ಹಿಂದೆ ಸ್ಥಳೀಯ ಆಡಳಿತ ಮಂಡಳಿ ವಜಾಗೊಳಿಸಿತ್ತು. ವಜಾಗೊಂಡ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ನ್ಯಾಯಾಲಯದ ಮೊರೆ ಹೋಗಿದ್ದು, ಈ ವಿಚಾರದಲ್ಲಿ ಉಂಟಾದ ಗೊಂದಲ ಹಾಗೂ ಆಡಳಿತಾತ್ಮಕ ತಕರಾರಿನಿಂದ ಮೂರು ತಿಂಗಳಿನಿಂದ ಹಾಲು ಉತ್ಪಾದಕರಿಗೆ ಬಟವಾಡಿ ಹಣ ಪಾವತಿ ಸ್ಥಗಿತಗೊಂಡಿದೆ ಎಂದು ರೈತರು ಆರೋಪಿಸಿದರು.

ಹೈನುಗಾರರಿಗೆ ತೀವ್ರ ತೊಂದರೆಯಾಗಿದ್ದು, ತಕ್ಷಣ ಹಾಲಿನ ಬಾಕಿ ಹಣ ಬಿಡುಗಡೆ ಮಾಡುವಂತೆ ರೈತರು ಹಾಗೂ ಸಂಘದ ಆಡಳಿತ ಮಂಡಳಿ ನಿರ್ದೇಶಕರು ಸಹಕಾರ ಸಂಘಗಳ ಸಹಾಯಕ ನಿಬಂಧಕರಿಗೆ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಸಹಾಯಕ ನಿಬಂಧಕರು, ಈ ವಿಷಯಕ್ಕೆ ಸಂಬಂಧಿಸಿದಂತೆ ವ್ಯಾಜ್ಯವು ನ್ಯಾಯಾಲಯದಲ್ಲಿರುವುದರಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿರುವ ಉತ್ಪಾದಕರ ಹಾಲಿನ ಬಟವಾಡಿಯನ್ನು ತುಮುಲ್ನ ವಿಸ್ತರಣಾಧಿಕಾರಿ ಹಾಗೂ ಇಲಾಖೆಯ ಅಧಿಕಾರಿಗಳ ಜೊತೆಗೂಡಿ ಬಟವಾಡಿ ಮಾಡುವಂತೆ ಆದೇಶಿಸಲಾಗುವುದು. ವಿಸ್ತರಣಾಧಿಕಾರಿಗಳ ಕಾರ್ಯವೈಫಲ್ಯದ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.

ಅಧ್ಯಕ್ಷೆ ಶೋಭಾ, ಉಪಾಧ್ಯಕ್ಷೆ ಹೇಮಾವತಿ, ನಿರ್ದೇಶಕರಾದ ಪ್ರೇಮ, ಅನಿತ, ಮಮತಾ, ಲತಾಮಣಿ, ನೇತ್ರಾವತಿ, ಹಾಲು ಉತ್ಪಾದಕರಾದ ರಾಜಣ್ಣ, ಶಿವಣ್ಣ, ಶಿವರಾಜು, ಬೀರಲಿಂಗಪ್ಪ, ರಂಗಸ್ವಾಮಿ, ರೈತರು ಹಾಗೂ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-17-1741707193

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.