ತಿಪಟೂರು: ‘ಬಕ್ರೀದ್ ಸಮೀಪಿಸುತ್ತಿದ್ದು ತಾಲ್ಲೂಕಿನಲ್ಲಿ ಗೋವುಗಳ ಅಕ್ರಮ ಸಾಗಣೆ ನಡೆಯುತ್ತಿದ್ದು, ಗೋ ಸಾಗಣೆ ಹಾಗೂ ಹತ್ಯೆ ನಿಷೇಧಿಸಬೇಕು’ ಎಂದು ತಾಲ್ಲೂಕು ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಒತ್ತಾಯಿಸಿದೆ.

ವಿಶ್ವ ಹಿಂದೂ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಬಾಳೆಕಾಯಿ ನಟರಾಜು ಮಾತನಾಡಿ, ಗೋಹತ್ಯೆ ಹಾಗೂ ಆಕ್ರಮ ಕಾಸಾಯಿ ಖಾನೆ ನಡೆಯದಂತೆ ನಗರಸಭೆ ಆಯುಕ್ತರಿಗೆ ಹಾಗೂ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಲಾಗಿದೆ. ಹಬ್ಬದ ಹಿನ್ನಲೆಯಲ್ಲಿ ಸಾಗಣೆ ನಡೆಯುತ್ತದೆ. ತಾಲ್ಲೂಕಿನ ಗಡಿಭಾಗದಲ್ಲಿ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಬೇಕು ಎಂದರು.

ಜಾನುವಾರುಗಳ ರಕ್ಷಣೆ ಮಾಡಿದಾಗ ಕಾರ್ಯಕರ್ತರು ರಾಸುಗಳನ್ನು ಖಾಸಗಿ ಗೋಶಾಲೆಗಳಾದ ನೊಣವಿನಕೆರೆ ಕಾಡಸಿದ್ದೇಶ್ವರ ಮಠ ಹಾಗೂ ಮಡೆನೂರು ವಿನಯ್ ಗೋಶಾಲೆಗೆ ಕಳುಹಿಸಲಾಗುತ್ತಿದೆ. ಆದ್ದರಿಂದ ತಾಲ್ಲೂಕಿನಲ್ಲಿ ಸರ್ಕಾರದಿಂದ ಗೋಶಾಲೆ ತೆರೆಯಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.

ಮುರಳೀಧರ್ ಮಲ್ಲೇನಹಳ್ಳಿ ಮಾತನಾಡಿ, ತಾಲ್ಲೂಕಿನಲ್ಲಿರುವ ಕಸಾಯಿಖಾನೆಗಳ ಪಟ್ಟಿಯನ್ನು ಬಹಿರಂಗಪಡಿಸಬೇಕು. ಗೋವು ಅಕ್ರಮ ಸಾಗಣೆ ಹಾಗೂ ಗೋಹತ್ಯೆ ತಡೆಗಟ್ಟಬೇಕು. ವಿಫಲವಾದರೆ ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಲಾಗುವುದು ಎಂದರು

ಗೌತಮ್ ಮಾತನಾಡಿ, ಗೋರಕ್ಷಣೆಗೆ ಪೋಲಿಸರು ಅತ್ಯಾಧುನಿಕ ತಾಂತ್ರಿಕತೆ ಬಳಸಬೇಕು. ವಾಹನದೊಳಗೆ ಜಾನುವಾರುಗಳಿವೆಯೇ ಎಂದು ಪರೀಕ್ಷಿಸಲು ಆಯಕಟ್ಟಿನ ಸ್ಥಳಗಳಲ್ಲಿ ಇಲೆಕ್ಟ್ರಾನಿಕ್ ಸ್ಕ್ಯಾನರ್ ಬಳಸಬೇಕು ಎಂದರು.

ಸಂಚಾಲಕ ಪ್ರಜ್ವಲ್ ಮಾತನಾಡಿ, ಸಾರ್ವಜನಿಕರು ಗಂಡು ಕರುಗಳನ್ನು ಕಸಾಯಿಖಾನೆಗಳಿಗೆ ಕಳುಹಿಸುವ ಬದಲು ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗದಳ ಕಾರ್ಯಕರ್ತರಿಗೆ ಮಾಹಿತಿ ನೀಡಿದರೆ ಅವುಗಳನ್ನು ಉಚಿತವಾಗಿ ಗೋಶಾಲೆಗೆ ಕಳುಹಿಸಲಾಗುವುದು ಎಂದು ಹೇಳಿದರು.

ಗೋಷ್ಠಿಯಲ್ಲಿ ಕೃಷ್ಣ, ಪ್ರಜ್ವಲ್, ಮಧು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-17-1439270083

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.