ತಿಪಟೂರು: ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಶಾಲಾ ಆರಂಭೋತ್ಸವ, ಪೋಷಕರ ಸಭೆ, ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಮತ್ತು ಸಮವಸ್ತ್ರ ವಿತರಣೆ ಕಾರ್ಯಕ್ರಮ ಸೋಮವಾರ ನಡೆಯಿತು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಶಾಸಕ ಕೆ. ಷಡಕ್ಷರಿ, ‘ಶಿಕ್ಷಣ ಮತ್ತು ಆರೋಗ್ಯಕ್ಕೆ ಎಂದೆಂದಿಗೂ ನನ್ನ ಮೊದಲ ಆದ್ಯತೆ. ಶಾಲೆ ಆರಂಭದ ದಿನ ನಿಮ್ಮೊಂದಿಗಿದ್ದು, ಮಕ್ಕಳಿಗೆ ಅಗತ್ಯವಿರುವ ಸವಲತ್ತುಗಳನ್ನು ನೀಡುತ್ತೇನೆ. ಅನುತ್ತೀರ್ಣರಾದ ಮಕ್ಕಳನ್ನೂ ಮೇಲೆತ್ತುವ ಕೆಲಸವನ್ನು ಶಿಕ್ಷಕರು ಮಾಡಬೇಕು’ ಎಂದು ಸಲಹೆ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಮಣಿ ಮಾತನಾಡಿ, ತಾಲ್ಲೂಕಿನ ಎಲ್ಲ ಸರ್ಕಾರಿ ಶಾಲೆಗಳು ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಶಾಲಾ ಸಮವಸ್ತ್ರ ಹಾಗೂ ಪುಸ್ತಕಗಳನ್ನು ನೀಡಲಾಗಿದೆ. ಶೇ 90ರಷ್ಟು ಪುಸ್ತಕಗಳು ಈಗಾಗಲೇ ಎಲ್ಲಾ ಶಾಲೆಗಳಿಗೆ ತಲುಪಿದೆ ಎಂದು ಹೇಳಿದರು.

ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಎಚ್.ಎಂ. ಸುದರ್ಶನ್ ಮಾತನಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-17-1199143519

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.