ತಿಪಟೂರು: ತಾಲ್ಲೂಕಿನ ಹೊಂಗೆಲಕ್ಷ್ಮಿ ಕ್ಷೇತ್ರದ ಅಂಗನವಾಡಿ ಕೇಂದ್ರದಲ್ಲಿ ಪೋಷಣ ಅಭಿಯಾನ ಹಾಗೂ ಮಹಿಳಾ ಗ್ರಾಮ ಸಭೆ ಬುಧವಾರ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ದೀಪ ಹೆಬ್ಬಳ್ಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ದೊರೆಯುವ ಯೋಜನೆಗಳ ಮಹತ್ವ, ಮಕ್ಕಳ ಬೆಳವಣಿಗೆಯಲ್ಲಿ ಸಾವಿರ ದಿನಗಳ ಮಹತ್ವ, ಸಮತೋಲಿತ ಆಹಾರದ ಪ್ರಾಮುಖ್ಯತೆ, ಗರ್ಭಿಣಿ, ಬಾಣಂತಿಯರ ಆರೈಕೆ, ಅಂಗನವಾಡಿ ಕಾರ್ಯಕರ್ತರು ಫಲಾನುಭವಿಗಳಿಗೆ ಒದಗಿಸಬೇಕಾದ ಸರ್ಕಾರದ ಸೌಲಭ್ಯಗಳ ಬಗ್ಗೆ ಮಾಹಿತಿ ಹಾಗೂ ಚುಚ್ಚುಮದ್ದುಗಳ ಮಹತ್ವದ ಬಗ್ಗೆ ಮಾಹಿತಿ ನೀಡಿದರು.

ಎಚ್.ಎಲ್ ಕ್ಷೇತ್ರದ ವೈದ್ಯಾಧಿಕಾರಿ ರಾಧಿಕಾ ಮಾತನಾಡಿ, ಪೌಷ್ಟಿಕ ಆಹಾರ ಮಹತ್ವ, ಜೀವಸತ್ವಗಳ ಕೊರತೆಯಿಂದ ಆಗುವ ಸಮಸ್ಯೆ, ಗರ್ಭಿಣಿ ಹಾಗೂ ಬಾಣಂತಿಯರು ತೆಗೆದುಕೊಳ್ಳಬೇಕಾದ ಆಹಾರ ಪದಾರ್ಥಗಳ ಪ್ರಾಮುಖ್ಯತೆ, ಆಧುನಿಕ ಆಹಾರ ಕ್ರಮಗಳಿಂದಾಗುವ ವ್ಯತ್ಯಾಸ, ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿಯಿಂದಾಗುವ ಸಮಸ್ಯೆಗಳ ಕುರಿತು ಮಾತನಾಡಿದರು.

ಗುಂಗುರು ಮಳೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಮಾಮಹೇಶ್, ವಲಯ ಮೇಲ್ವಿಚಾರಕ ಸುಮಂಗಲ ಬದಾಮಿ, ಕಾರ್ಯಕರ್ತರು, ಮಕ್ಕಳು, ಪಾಲಕರು, ಆಶಾ ಕಾರ್ಯಕರ್ತರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-17-1919963052

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.