ತಿಪಟೂರು: ಗೋರಕ್ಷಣೆ ಸಂದರ್ಭದಲ್ಲಿ ಹಲ್ಲೆಗೊಳಗಾದ ಐದು ಮಂದಿ ಹಿಂದೂ ಕಾರ್ಯಕರ್ತರಿಗೆ ತಲಾ ₹10ಸಾವಿರವನ್ನು ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್ ನೀಡಿದರು.

ಈ ವೇಳೆ ಮಾತನಾಡಿದ ಅವರು, ಹಿಂದೂಗಳ ಮೇಲಿನ ಹಲ್ಲೆ ವಿರೋಧಿಸಿ ತಿಪಟೂರಿನಲ್ಲಿ ಬಂದ್ ಮತ್ತು ಬೃಹತ್ ಪ್ರತಿಭಟನೆ ನಡೆಸಲಾಗಿದೆ. ಘಟನೆ ನಡೆದು ಬಹಳ ದಿನಗಳಾದರೂ ಪೊಲೀಸರು ಪ್ರಮುಖ ಆರೋಪಿಗಳನ್ನು ಬಂಧಿಸಿಲ್ಲ. ಪೊಲೀಸ್ ಇಲಾಖೆ ಘಟನೆಯನ್ನು ಕಾನೂನು ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಪರಿಶೀಲಿಸಿ, ತಪ್ಪಿತಸ್ಥರ ವಿರುದ್ಧ ತ್ವರಿತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಬಾಳೆಕಾಯಿ ನಟರಾಜು ಮಾತನಾಡಿ, ಹಲ್ಲೆ ಪ್ರಕರಣದ ಪ್ರತಿಭಟನೆ ವೇಳೆ ಮಾತು ಕೊಟ್ಟಂತೆ ಶಾಂತಕುಮಾರ್ ಎಲ್ಲ ಕಾರ್ಯಕರ್ತರನ್ನು ಕರೆಸಿ ಆರ್ಥಿಕ ನೆರವು ನೀಡಿದ್ದಾರೆ ಎಂದರು.

ಜೆಡಿಎಸ್ ನಗರಾಧ್ಯಕ್ಷ ಕಂಚಘಟ್ಟ ರಾಜು, ಕಾರ್ಯದರ್ಶಿ ಶಿವಸ್ವಾಮಿ, ತಾಲೂಕು ಕಾರ್ಯದರ್ಶಿ ನಟರಾಜು ಗುರುಗದಹಳ್ಳಿ, ಯುವ ಘಟಕದ ಅಧ್ಯಕ್ಷ ಸುದರ್ಶನ್, ನಟರಾಜು ಮತ್ತು ಇತರ ಸಂಘಟನೆಗಳ ಕಾರ್ಯಕರ್ತರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-17-2118815798

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.