ತಿಪಟೂರು: ವಿದ್ಯುತ್ ಕಂಬ ಹಾಗೂ ತಂತಿಗಳಿಗೆ ಅಂಟಿಕೊಂಡಿರುವ ಮರದ ಕೊಂಬೆಗಳನ್ನು ತೆರವುಗೊಳಿಸುವಂತೆ ನಾಲ್ಕು ತಿಂಗಳಿನಿಂದ ತಿಳಿಸಿದರೂ ಬೆಸ್ಕಾಂ ಹಾಗೂ ಅರಣ್ಯ ಇಲಾಖೆಗಳ ನಿರ್ಲಕ್ಷ್ಯವಹಿಸಿವೆ ಎಂದು ಮತ್ತಿಹಳ್ಳಿ ಗ್ರಾಮ ಪಂಚಾಯಿತಿಯ ಕರಿಕೆರೆ ಗ್ರಾಮಸ್ಥರು ದೂರಿದ್ದಾರೆ.

ಕರಿಕೆರೆ ಗ್ರಾಮ ಮುಂಭಾಗದ ಅರಳಿ ಮರವು ಬೃಹದಾಕಾರವಾಗಿ ಬೆಳೆಯುತ್ತಿದ್ದು, ಅದರ ಕೊಂಬೆಗಳು ನೇರವಾಗಿ ವಿದ್ಯುತ್ ಕಂಬ ಹಾಗೂ ತಂತಿಗಳ ಮೇಲೆ ಆವರಿಸಿಕೊಂಡಿವೆ. ಮಳೆಗಾಲ ಆರಂಭವಾಗಿದ್ದು, ಕೊಂಬೆಗಳು ಮುರಿದು ಬೀಳುವ ಭೀತಿ ಹೆಚ್ಚಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಕೊಂಬೆಗಳು ಮುರಿದು ವಿದ್ಯುತ್ ತಂತಿಗಳ ಮೇಲೆ ಬಿದ್ದರೆ 10ರಿಂದ 15 ವಿದ್ಯುತ್ ಕಂಬಗಳು ಸರಣಿ ರೀತಿಯಲ್ಲಿ ಹಾನಿಗೊಳಗಾಗುವ ಸಾಧ್ಯತೆ ಇದೆ. ಇದರಿಂದ ವಿದ್ಯುತ್ ವ್ಯತ್ಯಯ ಉಂಟಾಗುವುದಷ್ಟೇ ಅಲ್ಲದೆ, ಬೆಂಕಿ ಅವಘಡ ಅಥವಾ ವಿದ್ಯುತ್ ಶಾಕ್ ಅಪಾಯ, ಮನೆಯ ಮೇಲೆ ವಿದ್ಯುತ್ ಕಂಬಗಳು ಬೀಳುವ ಸಾಧ್ಯತೆ ಹೆಚ್ಚಾಗಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

ನಾಲ್ಕು ತಿಂಗಳಿನಿಂದ ಬೆಸ್ಕಾಂ, ಅರಣ್ಯ ಇಲಾಖೆ ಮತ್ತು ಗ್ರಾಮ ಪಂಚಾಯಿತಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-17-697695291

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.