ತಿಪಟೂರು: ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ 2024ರ ಆಗಸ್ಟ್ನಲ್ಲಿ ನಡೆದ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿರುವ ಆರೋಪದ ಮೇರೆಗೆ ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ನಾಲ್ವರು ನಗರಸಭಾ ಸದಸ್ಯರ ಸದಸ್ಯತ್ವ ಅನರ್ಹಗೊಳಿಸಿ ಜಿಲ್ಲಾಧಿಕಾರಿ ನ್ಯಾಯಾಲಯ ಆದೇಶಿಸಿದೆ.

31ನೇ ವಾರ್ಡ್ನ ಬಿಜೆಪಿ ಬೆಂಬಲಿತ ಸದಸ್ಯೆ ಅಶ್ವಿನಿ ದೇವರಾಜು, 16ನೇ ವಾರ್ಡ್ನ ಬಿಜೆಪಿ ಬೆಂಬಲಿತ ಸದಸ್ಯೆ ಪದ್ಮಶಿವಪ್ಪ, 11ನೇ ವಾರ್ಡ್ ಜೆಡಿಎಸ್ ಬೆಂಬಲಿತ ಸದಸ್ಯ ಎಂ.ಬಿ.ಜಯರಾಂ, 24ನೇ ವಾರ್ಡ್ನ ಜೆಡಿಎಸ್ ಬೆಂಬಲಿತ ಸದಸ್ಯೆ ಅಸೀಪಾ ಬಾನು ಅನರ್ಹಗೊಂಡ ಸದಸ್ಯರು.

33 ಸಂಖ್ಯಾಬಲದ ನಗರಸಭೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಯಮುನಾ ಎ.ಎಸ್., ಉಪಾಧ್ಯಕ್ಷ ಸ್ಥಾನಕ್ಕೆ ಮೇಘಶ್ರೀ ಭೂಷಣ್ ಸ್ಪರ್ಧಿಸಿದ್ದರು. ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಲತಾ ಲೋಕೇಶ್ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಂಗಮೇಶ್ ಸ್ಪರ್ಧಿಸಿದ್ದರು. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕ್ರಮವಾಗಿ 18 ಹಾಗೂ 15 ಮತಗಳು ಚಲಾವಣೆಗೊಂಡು ಯಮುನಾ ಅಧ್ಯಕ್ಷರಾಗಿ, ಮೇಘಶ್ರೀ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಚುನಾವಣೆಗೆ ಮುನ್ನ ಬಿಜೆಪಿ ಹಾಗೂ ಜೆಡಿಎಸ್ ಹೊರಡಿಸಿದ್ದ ವಿಪ್ ಉಲ್ಲಂಘಿಸಿ ನಾಲ್ವರು ಸದಸ್ಯರು ಅಡ್ಡ ಮತದಾನ ಮಾಡಿದ್ದರು. ಸದಸ್ಯರಾದ ಲತಾ ಹಾಗೂ ಸಂಗಮೇಶ್ ಈ ಬಗ್ಗೆ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.