ತಿಪಟೂರು: ನಗರದಲ್ಲಿ ನೀರಿಗೆ ಸಮಸ್ಯೆ ಎದುರಾಗಬಹುದು ಎಂದು ಈ ಹಿಂದೆಯೇ ಹಲವು ಬಾರಿ ಎಚ್ಚರಿಸಿ ಪ್ರತಿಭಟನೆ ಮಾಡಿದ್ದರೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಯಾವುದೇ ಕ್ರಮಕೈಗೊಂಡಿಲ್ಲ. ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಲ್ಲಿ ತಾಲ್ಲೂಕು ಆಡಳಿತ ವಿಫಲವಾಗಿದೆ ಎಂದು ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್ ಆರೋಪಿಸಿದರು.

ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು ಶೀಘ್ರ ಸಮಸ್ಯೆ ಪರಿಹರಿಸಿ ಜನರಿಗೆ ಕುಡಿಯುವ ನೀರು ಪೂರೈಸಲು ವ್ಯವಸ್ಥೆ ಮಾಡದಿದ್ದರೆ ನಗರಸಭೆ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದರು.

ತಿಪಟೂರು ಅಮಾನಿಕೆರೆ ಮತ್ತು ಈಚನೂರು ಕೆರೆಗೆ ನೀರು ಹರಿಸಿಕೊಳ್ಳದ ಪರಿಣಾಮ ಈಗ ನಗರದ ಜನತೆ ಕುಡಿಯುವ ನೀರಿನ ಕೊರತೆ ಎದುರಿಸಬೇಕಾಗಿದೆ. ಈ ಸಮಸ್ಯೆ ಕುರಿತು ಜೆಡಿಎಸ್ ಹಿಂದೆಯೇ ನಗರಸಭೆಗೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ನಗರದಲ್ಲಿ 61 ಹೊಸ ಕೊಳವೆಬಾವಿಗಳನ್ನು ಕೊರೆಸಿದ್ದೇವೆ ಎಂದು ನಗರಸಭೆ ಆಯುಕ್ತರು ತಿಳಿಸಿದ್ದಾರೆ. ಆದರೂ ನೀರಿನ ಸಮಸ್ಯೆ ಏಕೆ ಪರಿಹಾರವಾಗಿಲ್ಲ ಎಂದು ಪ್ರಶ್ನಿಸಿದರು.

‘ಅಮಾನಿಕೆರೆ ಏರಿ ದುರಸ್ತಿ ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿದ್ದು, ಕೇವಲ ಒಂದು ಜೆಸಿಬಿ ಯಂತ್ರದ ಮೂಲಕ ಕೆಲಸ ಸಾಗುತ್ತಿದೆ. ಇದರಿಂದ ಮುಂದಿನ ಮಳೆಗಾಲದಲ್ಲಿಯೂ ಕೆರೆಗೆ ಸಮರ್ಪಕವಾಗಿ ನೀರು ತುಂಬಿಸಿಕೊಳ್ಳುವ ಸಾಧ್ಯತೆ ಕಡಿಮೆ. ಶಾಸಕರು ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆ ಮಾಡಲು ಆಗುವುದಿಲ್ಲ ಎಂದು ತಿಳಿಸಿದರೆ ಮಾರನೆಯ ದಿನವೇ 25 ಟ್ಯಾಂಕರ್ಗಳ ಮೂಲಕ ಪ್ರತಿದಿನ ನಗರದ ಜನತೆಗೆ ಕುಡಿಯುವ ನೀರು ಪೂರೈಸುವ ವ್ಯವಸ್ಥೆ ಮಾಡತ್ತೇನೆ’ ಎಂದರು.

ಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾ ಪ್ರಧಾನಕಾರ್ಯದರ್ಶಿ ಶಿವಸ್ವಾಮಿ, ನಗರಾಧ್ಯಕ್ಷ ರಾಜು ಕಂಚಾಘಟ್ಟ, ತಾಲ್ಲೂಕು ಕಾರ್ಯದರ್ಶಿ ನಟರಾಜು ಗುರುಗದಹಳ್ಳಿ, ಯುವ ಘಟಕದ ಅಧ್ಯಕ್ಷ ಸುದರ್ಶನ್, ನಟರಾಜು, ಸಂತೋಷ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-17-1548864343

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.