ತಿಪಟೂರು: ನಗರದ ಜನರಿಗೆ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆ ಹಾಗೂ ಕೊರತೆಯಾಗದಂತೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಕೆ.ಷಡಕ್ಷರಿ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾರದಾನಗರ ಮತ್ತು ಗಾಂಧಿನಗರ ಬಡಾವಣೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು ಕೂಡಲೇ ಅಲ್ಲಿ ಐದು ಬೋರ್ವೆಲ್ ಕೊರೆದು ನೀರು ಸರಬರಾಜು ಮಾಡಲು ಸೂಚಿಸಲಾಗಿದೆ. 15 ದಿನಗಳಲ್ಲಿ ಆ ಭಾಗದಲ್ಲಿ ನೀರಿನ ಕೊರತೆ ನಿವಾರಣೆಯಾಗಲಿದೆ ಎಂದರು.

ನಗರದ ಜನಸಂಖ್ಯೆ ಒಂದು ಲಕ್ಷ ದಾಟುತ್ತಿದ್ದು ಮುಂದಿನ ಹತ್ತು-ಹದಿನೈದು ವರ್ಷ ನಗರಕ್ಕೆ ನೀರಿನ ಕೊರತೆಯಾಗದಂತೆ ವಿಶೇಷ ಯೋಜನೆ ರೂಪಿಸಲಾಗಿದೆ. ಉಪಚುನಾವಣೆ ಮುಗಿದ ಬಳಿಕ ಸಂಪುಟದ ಅನುಮೋದನೆ ಪಡೆದು ನೊಣವಿನಕೆರೆಯಿಂದ ನಗರಕ್ಕೆ ಪೈಪ್ಲೈನ್ ಮೂಲಕ ನೀರು ತರಲಾಗುವುದು. ಈ ಯೋಜನೆಗಾಗಿ ಈಗಾಗಲೇ ಹೇಮಾವತಿ ನಾಲೆಯಿಂದ 0.3 ಟಿಎಂಸಿ ನೀರನ್ನು ಹೆಚ್ಚುವರಿಯಾಗಿ ಪಡೆದುಕೊಳ್ಳಲಾಗಿದೆ ಎಂದರು.

ತಾಲೂಕಿನಾದ್ಯಂತ ಮನೆ-ಮನೆಗೂ ಕುಡಿಯುವ ನೀರು ಪೂರೈಸುವ ಮಹತ್ವದ ಯೋಜನೆ ಚಾಲ್ತಿಯಲ್ಲಿದ್ದು, ಈ ವರ್ಷದ ಕೊನೆಯೊಳಗೆ ಮುಖ್ಯಮಂತ್ರಿ ಕರೆಸಿ ಯೋಜನೆ ಪ್ರಾರಂಭಿಸಲಾಗುವುದು. ಎತ್ತಿನಹೊಳೆ ಮೂಲಕ ಶೀಘ್ರದಲ್ಲಿಯೇ ತಾಲ್ಲೂಕಿನ ಕೆರೆಗಳಿಗೆ ನೀರು ಹರಿಯುವ ವಿಶ್ವಾಸವಿದೆ. ಭದ್ರಾ ನೀರನ್ನು ಕೂಡ ತರುವ ಪ್ರಯತ್ನದಲ್ಲಿದ್ದೇವೆ. ಕುಡಿಯುವ ನೀರಿನ ಯೋಜನೆಗಳಿಗೆ ಹೆಚ್ಚು ಮಹತ್ವ ನೀಡಿದ್ದು ತಾಲೂಕಿನಾದ್ಯಂತ ಕುಡಿಯುವ ನೀರು ಕೊರತೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿಯಿಂದ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಚ್.ಎಂ.ಸುದರ್ಶನ್ ಮಾತನಾಡಿ, ತಾಲ್ಲೂಕಿನ ಐದು ಹಳ್ಳಗಳಲ್ಲಿ ನೀರಿನ ಕೊರತೆ ಗುರುತಿಸಲಾಗಿದೆ. ಆ ಭಾಗಗಳಲ್ಲಿ ಹೆಚ್ಚುವರಿ ಬೋರ್ವೆಲ್ ಕೊರೆದು ನೀರು ಪೂರೈಸಲು ಕ್ರಮ ವಹಿಸಲಾಗಿದೆ. ನ್ಯಾಕೇನಹಳ್ಳಿಯಲ್ಲಿ ಹಲವು ಕೊಳವೆ ಬಾವಿಗಳನ್ನು ಕೊರೆದರೂ ನೀರು ದೊರೆಯದ ಕಾರಣ ಹತ್ತಿರದ ಪಂಚಾಯಿತಿ ವ್ಯಾಪ್ತಿಗಳಲ್ಲಿ ನೀರು ಲಭ್ಯವಿರುವ ಕಡೆ ಕೊಳವೆಬಾವಿ ಕೊರೆದು ಅಲ್ಲಿಂದ ನೀರು ತರುವ ಪ್ರಯತ್ನ ನಡೆಯುತ್ತಿದೆ. ಈಗ ಮೂರು ಟ್ಯಾಂಕರ್ಗಳ ಮೂಲಕ ಕೆಲವು ಭಾಗಗಳಿಗೆ ನೀರು ಪೂರೈಸಲಾಗುತ್ತಿದೆ ಎಂದು ತಿಳಿಸಿದರು.

ನಗರಸಭೆ ಆಯುಕ್ತ ವಿಶ್ವೇಶ್ವರ ಬದರಗಡೆ ಮಾಹಿತಿ ನೀಡಿ, ನಗರಕ್ಕೆ ನೀರು ಪೂರೈಸಲು 241 ಕೊಳವೆ ಬಾವಿಗಳ ನೀರು ಪಡೆದುಕೊಳ್ಳಲಾಗುತ್ತಿದೆ. ಇದಲ್ಲದೆ ಇತರೆ ನೀರಿನ ಮೂಲವಾಗಿ ಈಚನೂರು ಕೆರೆ ಇದ್ದು ಈಗ ಸದ್ಯಕ್ಕೆ ಅಲ್ಲಿನ ನೀರನ್ನು ಬಳಸಿಕೊಳ್ಳುತ್ತಿಲ್ಲ. ನಗರದಾದ್ಯಂತ ಆರು ಓವರ್ ಹೆಡ್ ಟ್ಯಾಂಕ್ಗಳನ್ನು ನೀರಿನ ಸಂಗ್ರಹಣೆಗೆ ಬಳಸಿಕೊಳ್ಳಲಾಗುತ್ತಿದೆ. ಇದರ ಒಟ್ಟು ಸಾಮರ್ಥ್ಯ 50 ಲಕ್ಷ ಲೀಟರ್. ಗಾಂಧಿನಗರದ ನೀರಿನ ಕೊರತೆ ನಿವಾರಣೆಗೆ ಮಾರನಗೆರೆ ಬಳಿ 10 ಕೊಳವೆಬಾವಿಗಳನ್ನು ಕೊರೆದು ಮೋಟರ್ ಪಂಪ್ ಅಳವಡಿಸುವ ₹50 ಲಕ್ಷ ಕಾಮಗಾರಿ ನಡೆಯುತ್ತಿದೆ. ನಗರಸಭೆ ವ್ಯಾಪ್ತಿಯ ಕೊಳವೆಬಾವಿಗಳ ಅಂತರ್ಜಲ ವೃದ್ಧಿಸಲು ಕೊಳವೆಬಾವಿಗಳ ಸುತ್ತ ಇಂಗುಗುಂಡಿ ನಿರ್ಮಿಸುವ ₹7.50ಲಕ್ಷ ವೆಚ್ಚದ ಕಾಮಗಾರಿ ಚಾಲನೆಯಲ್ಲಿದೆ ಎಂದು ಮಾಹಿತಿ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-17-1817341346

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.