ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿ ಶಿವರಾಮನಹಳ್ಳಿಯಲ್ಲಿ ಮದುವೆ ಊಟ ಸೇವಿಸಿದ್ದ 15 ಮಂದಿ ಅಸ್ವಸ್ಥಗೊಂಡಿದ್ದು, ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಗ್ರಾಮದ 14 ಮಂದಿಗೆ ಅಲ್ಲಿಯೇ ತಾತ್ಕಾಲಿಕ ವೈದ್ಯಕೀಯ ಕೆಂದ್ರ ತೆರೆದು, ಸ್ಥಳದಲ್ಲೇ ಚಿಕಿತ್ಸೆ ಒದಗಿಸಲಾಗುತ್ತಿದೆ.

ತಾಲ್ಲೂಕು ಆರೋಗ್ಯಾಧಿಕಾರಿ ಚನ್ನಕೇಶವ ಗ್ರಾಮಕ್ಕೆ ಭೇಟಿ ನೀಡಿದ್ದರು. ಹೊನ್ನವಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿ ಪರಿಶೀಲನೆ ನಡೆಸಿ ತುರ್ತು ಚಿಕಿತ್ಸಾ ಕೇಂದ್ರ ಆರಂಭಿಸಿದ್ದಾರೆ. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಚ್.ಎಂ. ಸುದರ್ಶನ, ಶಾಸಕ ಕೆ.ಷಡಕ್ಷರಿ ಗ್ರಾಮಸ್ಥರ ಆರೋಗ್ಯ ವಿಚಾರಿಸಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಚನ್ನಕೇಶವ ಮಾತನಾಡಿ, ಶಿವರಾಮನಹಳ್ಳಿಯಲ್ಲಿ ಸೋಮವಾರ ನಡೆದ ಮದುವೆಯ ದೇವತಾಕಾರ್ಯದ ಮಧ್ಯಾಹ್ನ ಊಟದ ಆಹಾರದಲ್ಲಿ ವ್ಯತ್ಯಾಸವಾಗಿರುವುದು ಕಂಡುಬಂದಿದೆ. ಆದ್ದರಿಂದ ಗ್ರಾಮದಲ್ಲಿಯೇ ಒಂದು ವಾರ ತಾತ್ಕಾಲಿಕ ಆರೋಗ್ಯ ಕೇಂದ್ರ ತೆರೆದು ವೈದ್ಯರನ್ನು ನಿಯೋಜಿಸಲಾಗಿದೆ. ಯಾರಿಗೂ ಗಂಭೀರವಾಗಿಲ್ಲ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-17-2004261041

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.