ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃತಕ ಬುದ್ಧಿಮತ್ತೆ ಅಳವಡಿಸಿಕೊಂಡ ಟಿಎಂಸಿಸಿ

Last Updated 23 ಡಿಸೆಂಬರ್ 2020, 3:57 IST
ಅಕ್ಷರ ಗಾತ್ರ

ತುಮಕೂರು: ತಂತ್ರಜ್ಞಾನ ದಿನದಿಂದ ದಿನಕ್ಕೆ ಆವಿಷ್ಕಾರಗೊಳ್ಳುತ್ತಿದ್ದು, ಆಧುನಿಕ ತಾಂತ್ರಿಕತೆ ಅಳವಡಿಸಿಕೊಂಡು ಗ್ರಾಹಕರಿಗೆ ಸೇವೆ ಸಲ್ಲಿಸುವಲ್ಲಿ ತುಮಕೂರು ಮರ್ಚೆಂಟ್ಸ್ ಕ್ರೆಡಿಟ್ ಕೋ–ಆಪರೇಟಿವ್ ಲಿಮಿಟೆಡ್ (ಟಿಎಂಸಿಸಿ) ಮುಂಚೂಣಿಯಲ್ಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದರು.

ತುಮಕೂರು ಮರ್ಚೆಂಟ್ಸ್ ಕ್ರೆಡಿಟ್ ಕೋ–ಆಪರೇಟಿವ್ ಲಿಮಿಟೆಡ್‌ನ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಅಳವಡಿಕೆ, 15ನೇ ವಾರ್ಷಿಕ ಸರ್ವ ಸದಸ್ಯರ ಸಭೆ, ಬ್ಯಾಂಕ್‌ನ ಅತ್ಯುತ್ತಮ ಗ್ರಾಹಕರಿಗೆ ಸೋಮವಾರ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಕೃತಕ ಬುದ್ಧಿಮತ್ತೆಯಂತಹ ತಂತ್ರಜ್ಞಾನವನ್ನೂ ಸಂಸ್ಥೆ ಅಳವಡಿಸಿಕೊಂಡಿದೆ. ತಂತ್ರಜ್ಞಾನದ ಮೂಲಕ ಗ್ರಾಹಕರಿಗೆ ಉತ್ತಮ ಸೇವೆಗಳನ್ನು ನೀಡಿ ಇತರ ಸಹಕಾರಿ ಸಂಸ್ಥೆಗಳಿಗೆ ಮಾದರಿಯಾಗಿದೆ. ಸಹಕಾರಿ ಕಾಯ್ದೆಯಲ್ಲಿ ಮಾಡಲಾದ ಬದಲಾವಣೆಯಿಂದ ಸಹಕಾರ ಸಂಘಗಳು ಜನರನ್ನು ತಲುಪಿವೆ ಎಂದು ತಿಳಿಸಿದರು.

ಟಿಎಂಸಿಸಿ ಅಧ್ಯಕ್ಷ ಎನ್.ಎಸ್.ಜಯಕುಮಾರ್ ಮಾತನಾಡಿ, ‘ಕೋವಿಡ್‌ನಿಂದಾಗಿ ಬ್ಯಾಂಕ್ ವಹಿವಾಟು ಮೊದಲಿನಂತೆ ನಡೆಯಲು ಸಾಧ್ಯವಾಗಿಲ್ಲ. ಗ್ರಾಹಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕೃತಕ ಬುದ್ಧಿಮತ್ತೆ ಅಳವಡಿಸಿ ಕೊಳ್ಳಲಾಗುತ್ತಿದೆ. ಡಿಜಿಟಲ್‌ಗಿಂತ ಉನ್ನತವಾಗಿರುವ ತಂತ್ರಾಂಶ ಅಳವಡಿಸಿಕೊಂಡಿರುವ ಮೊದಲ ಸಹಕಾರಿ ಬ್ಯಾಂಕ್ ನಮ್ಮದಾಗಿದೆ’ ಎಂದು ಹೆಮ್ಮೆಯಿಂದ ಹೇಳಿದರು.

ಗ್ರಾಹಕರಿಗೆ ಸುಲಭವಾಗಿ ಬ್ಯಾಂಕಿಂಗ್ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ತಂತ್ರಜ್ಞಾನ ಬಳಕೆ ಪ್ರಾರಂಭಿಸಲಾಗಿದೆ. ಜಯ ತಂತ್ರಾಂಶದಿಂದ ಗ್ರಾಹಕರು 24X7 ಸೇವೆ ಬಳಸಿಕೊಳ್ಳುತ್ತಿದ್ದಾರೆ ಎಂದರು.

ಶಾಸಕ ಜ್ಯೋತಿಗಣೇಶ್, ‘ಸಹಕಾರಿ ಸಂಸ್ಥೆಗಳು ತಂತ್ರಜ್ಞಾನ ಅಳವಡಿಸಿಕೊಳ್ಳಲು ಹಿಂದುಳಿದರೆ ನಶಿಸುವ ಅಪಾಯವನ್ನು ಎದುರಿಸಬೇಕಾಗುತ್ತದೆ. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಗ್ರಾಹಕರ ನಡುವಿನ ಬಾಂಧವ್ಯ ಕಡಿಮೆಯಾಗುತ್ತಿದ್ದು, ಈ ಅವಕಾಶ ಬಳಸಿಕೊಂಡು ಉತ್ತಮ ಸೇವೆ ಒದಗಿಸಲು ಮುಂದಾಗಬೇಕು’ ಎಂದು ಸಲಹೆ ಮಾಡಿದರು.

ಬಿಜೆಪಿ ಮುಖಂಡ ಸೊಗಡು ಶಿವಣ್ಣ, ಟಿಎಂಸಿಸಿ ಉಪಾಧ್ಯಕ್ಷ ಟಿ.ಎ.ಶ್ರೀಕರ, ಸಿಇಒ ರಮೇಶ್ ಮೊದಲಾದವರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT