ಗುರುವಾರ , ಜುಲೈ 16, 2020
24 °C

ರಾಜೀನಾಮೆ ನೀಡಿಲ್ಲ: ಹುಚ್ಚಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ತಮ್ಮ ಸಮುದಾಯದ (ಮಾದಿಗ) ಸದಸ್ಯರಿಗೆ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಸ್ಥಾನ ಬಿಟ್ಟುಕೊಡದ ಹಿನ್ನೆಲೆಯಲ್ಲಿ ಬೇಸರಗೊಂಡು ಜಿಲ್ಲಾ ಪಂಚಾಯಿತಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದ ಊರ್ಡಿಗೆರೆ ಕ್ಷೇತ್ರದ ಬಿಜೆಪಿ ಸದಸ್ಯ ವೈ.ಎಚ್.ಹುಚ್ಚಯ್ಯ ಅವರು ಮುಖಂಡರ ಭರವಸೆ ಹಿನ್ನೆಲೆಯಲ್ಲಿ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.

ತಾಲ್ಲೂಕು ಪಂಚಾಯಿತಿಯಲ್ಲಿ ಬಿಜೆಪಿ ಅಧಿಕಾರ ಹಿಡಿಯುವಾಗ ತಲಾ 20 ತಿಂಗಳ ಅಧಿಕಾರ ಸೂತ್ರ ರಚಿಸಿ, ಮೂವರಿಗೆ ಅವಕಾಶ ನೀಡಲು ನಿರ್ಧರಿಸಲಾಗಿತ್ತು. ಮೊದಲ ಅವಧಿಗೆ ವಡ್ಡರಹಳ್ಳಿ ಕ್ಷೇತ್ರದ ಗಂಗಾಂಜನೇಯ (ಪರಿಶಿಷ್ಟ ಜಾತಿ) ಅವರನ್ನು ಆಯ್ಕೆ ಮಾಡಲಾಗಿತ್ತು. ನಂತರದ ಅವಧಿಗೆ ಪರಿಶಿಷ್ಟ ಜಾತಿ ಮಾದಿಗ ಸಮುದಾಯಕ್ಕೆ ಸೇರಿದ ಊರುಕೆರೆ ಕ್ಷೇತ್ರದ ಕವಿತಾ ರಮೇಶ್ ಅವರಿಗೆ ಬಿಟ್ಟುಕೊಡಲು ನಿರ್ಧರಿಸಲಾಗಿತ್ತು.

‘ಗಂಗಾಂಜನೇಯ 50 ತಿಂಗಳು ಅಧಿಕಾರ ನಡೆಸಿದರೂ ತಮ್ಮ ಸ್ಥಾನದಿಂದ ಕೆಳಗಿಳಿದಿರಲಿಲ್ಲ. ಇದರಿಂದ ತಮ್ಮ ಸಮುದಾಯಕ್ಕೆ ಅನ್ಯಾಯವಾಗಿದೆ ಎಂಬ ನೋವಿನಿಂದ ರಾಜೀನಾಮೆ ನೀಡಲು ತೀರ್ಮಾನಿಸಿದ್ದೆ’ ಎಂದು ಹುಚ್ಚಯ್ಯ ತಿಳಿಸಿದರು.

‘ಪಕ್ಷದ ಮುಖಂಡರು ಸಮಸ್ಯೆ ಸರಿಪಡಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುವ ನಿರ್ಧಾರದಿಂದ ಹಿಂದೆ ಸರಿದಿದ್ದೇನೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.