ಶುಕ್ರವಾರ, ಫೆಬ್ರವರಿ 26, 2021
20 °C
ತಂಬಾಕು ಮುಕ್ತ ತುಮಕೂರು ಕಾರ್ಯಕ್ರಮ

ಸಿಗರೇಟ್ ಸೇದಿದರೆ ಒತ್ತಡಮುಕ್ತರಾಗಲ್ಲ: ಡಾ.ಪರಮೇಶ್ವರ ಎಚ್ಚರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ತುಮಕೂರು: ‘ಸಿಗರೇಟ್ ಸೇದಿದರೆ, ತಂಬಾಕು ಸೇವನೆ ಮಾಡಿದರೆ ಒತ್ತಡದಿಂದ ಹೊರಬರಲು ಸಾಧ್ಯ ಎಂಬ ತಪ್ಪು ಅಭಿಪ್ರಾಯ ತಂಬಾಕು ಸೇವನೆ ಮಾಡುವವರಲ್ಲಿ ಇದೆ. ಈ ತಪ್ಪು ಅಭಿಪ್ರಾಯ ಹೋಗಲಾಡಿಸಿ ಅವುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.

ಗುರುವಾರ ನಗರದ ಬಾಲಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೊಲೀಸ್, ಮಹಾನಗರ ಪಾಲಿಕೆ, ವಾರ್ತಾ ಮತ್ತು ಸಂಪರ್ಕ ಇಲಾಖೆ ಸೇರಿ ವಿವಿಧ ಇಲಾಖೆ ಆಶ್ರಯದಲ್ಲಿ ಆಯೋಜಿಸಿದ್ಧ ತಂಬಾಕು ಮುಕ್ತ ತುಮಕೂರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

'ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಯುವಕರಲ್ಲಿ ಜಾಗೃತಿ ಮೂಡಿಸಬೇಕು. ಕ್ರೀಡೆ, ಆರೋಗ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಪ್ರೇರೇಪಿಸಬೇಕು. ತುಮಕೂರು ಜಿಲ್ಲೆಯನ್ನು ತಂಬಾಕು ಮುಕ್ತ ಗೊಳಿಸುವುದು ತುಂಬಾ ಕಷ್ಟದ ಕೆಲಸ. ಆದಾಗ್ಯೂ ಈ ಪ್ರಯತ್ನಕ್ಕೆ ಸಂಪೂರ್ಣ ಸಹಕಾರವಿದೆ' ಎಂದು ಹೇಳಿದರು.

'ಗುಟ್ಕಾ ಸೇರಿದಂತೆ ತಂಬಾಕು ವಸ್ತುಗಳ ಸೇವನೆಯಿಂದ ಕ್ಯಾನ್ಸರ್ ನಂತಹ ಮಾರಕ ಕಾಯಿಲೆಗಳು ಬರುತ್ತವೆ. ಮೂರನೆ ಹಂತದ ಕ್ಯಾನ್ಸರ್‌ಗೆ ಬಾಧಿತರಾದರೆ ಜನರು ಬದುಕುಳಿಯುವುದು ಕಷ್ಟ ಸಾಧ್ಯ. ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಮೇಲೆ ಆರೋಗ್ಯಕ್ಕೆ ಹಾನಿಕರ ಎಂಬ ಸಂದೇಶ ಹೊತ್ತ ಚಿತ್ರ ಪ್ರದರ್ಶಿಸಿದರೂ ಜನರು ಅದನ್ನು ನೋಡಿಯೂ ನೋಡದಂತೆ ಆ ವಸ್ತು ಸೇವನೆ ಮಾಡುತ್ತಿರುವುದು ದುರದೃಷ್ಟಕರ' ಎಂದು ಹೇಳಿದರು.

ಶಾಸಕ ಜ್ಯೋತಿ ಗಣೇಶ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಆರ್.ಚಂದ್ರಿಕಾ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ವೀರಭದ್ರಯ್ಯ, ಇತರ ಅಧಿಕಾರಿಗಳಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು