ಶುಕ್ರವಾರ, ಏಪ್ರಿಲ್ 3, 2020
19 °C

ಕೊಬ್ಬರಿಗೆ ₹10,300 ಬೆಂಬಲ ಬೆಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಿಪಟೂರು: ಕೇಂದ್ರ ಸರ್ಕಾರ ಕ್ವಿಂಟಲ್ ಕೊಬ್ಬರಿಗೆ ₹ 10,300 ಬೆಂಬಲ ಬೆಲೆ ಘೋಷಿಸಿದೆ.

ಏಷ್ಯಾದಲ್ಲಿಯೇ ಅತೀ ದೊಡ್ಡ ಕೊಬ್ಬರಿ ಮಾರುಕಟ್ಟೆ ಹೊಂದಿರುವ ತಿಪಟೂರಿನಲ್ಲಿ ಕೊಬ್ಬರಿ ಬೆಲೆ ಇಳಿಕೆಯಿಂದ ರೈತರು ಆಘಾತಗೊಂಡಿದ್ದರು. ಈ ಬೆಂಬಲ ಬೆಲೆ ಘೋಷಣೆಯು ತುಸು ಚೇತರಿಸಿಕೊಳ್ಳುವಂತೆ ಮಾಡಿದೆ.

ಪ್ರಸ್ತುತ ತಿಪಟೂರು ಕೊಬ್ಬರಿ ಬೆಲೆ ಕ್ವಿಂಟಲ್‌ಗೆ ₹ 10 ಸಾವಿರ ಇದೆ. ತಿಪಟೂರು ಎಪಿಎಂಸಿಯಲ್ಲಿ ಕಳೆದ ವರ್ಷ 42 ಸಾವಿರ ಟನ್ ಕೊಬ್ಬರಿ ವಹಿವಾಟು ನಡೆದಿತ್ತು. ಕ್ವಿಂಟಲ್ ಒಂದಕ್ಕೆ ₹ 19,000 ರಿಂದ ₹20,000 ವರೆವಿಗೂ ಬೆಲೆ ದೊರಕಿತ್ತು.

ರೈತರು ಕನಿಷ್ಠ ₹ 15,000 ಬೆಂಬಲ ಬೆಲೆ ಘೋಷಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದರು. ಆದರೆ ಸರ್ಕಾರ ₹ 10,300 ಬೆಂಬಲ ಬೆಲೆ ಘೋಷಿಸಿರುವುದು ರೈತರಿಗೆ ಬೇಸರ ತರಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)