ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚುನಾವಣೆ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

Published 13 ಫೆಬ್ರುವರಿ 2024, 5:44 IST
Last Updated 13 ಫೆಬ್ರುವರಿ 2024, 5:44 IST
ಅಕ್ಷರ ಗಾತ್ರ

ತುಮಕೂರು: ಮುಂಬರುವ ಲೋಕಸಭಾ ಚುನಾವಣೆ ಸಮಯದಲ್ಲಿ ವೆಚ್ಚ ವೀಕ್ಷಣೆ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದಂತೆ ಚುನಾವಣೆ ಅಧಿಕಾರಿಗಳಿಗೆ ಸೋಮವಾರ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ಪಂಚಾಯಿತಿ ವಿಡಿಯೊ ಕಾನ್ಫರೆನ್ಸ್ ಸಭಾಂಗಣದಲ್ಲಿ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ನೇತೃತ್ವದಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ತರಬೇತಿ ನೀಡಲಾಯಿತು. ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ವಿಧಾನಸಭಾ ಕ್ಷೇತ್ರವಾರು ವೆಚ್ಚ ವೀಕ್ಷಕರು, ಸಹಾಯಕ ವೆಚ್ಚ ವೀಕ್ಷಕರು, ನೋಡಲ್ ಅಧಿಕಾರಿಗಳು, ಲೆಕ್ಕಪತ್ರ ನಿರ್ವಹಣೆ ತಂಡದ ಅಧಿಕಾರಿಗಳು ತರಬೇತಿಯಲ್ಲಿ ಪಾಲ್ಗೊಂಡಿದ್ದರು. ಎಂಸಿಸಿ, ವೆಚ್ಚ ನಿರ್ವಹಣೆ, ಚುನಾವಣಾ ಖರ್ಚು ವೆಚ್ಚದ ಮೇಲೆ ನಿಗಾ ವಹಿಸುವುದು, ಸಂಚಾರ ಜಾಗೃತ ದಳ, ವಿಡಿಯೊ ಕಣ್ಗಾವಲು, ಎಸ್‍ಎಸ್‍ಟಿ, ಎಂಸಿಎಂಸಿ ಸಮಿತಿ, ಸ್ವೀಪ್ ಸಮಿತಿ ಕೆಲಸ ಕಾರ್ಯಗಳಿಗೆ ಸಂಬಂಧಿಸಿದಂತೆ ತರಬೇತಿ ನೀಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT