ಸೋಮವಾರ, ನವೆಂಬರ್ 30, 2020
25 °C

ಶಿಕ್ಷಕರ ವರ್ಗಾವಣೆ; ಆ್ಯಪ್‌ನಲ್ಲಿ ಮಾಹಿತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: 2020–21ನೇ ಸಾಲಿನ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದ್ದು ಶಿಕ್ಷಕರು ಶಿಕ್ಷಕ ಮಿತ್ರ ಆ್ಯಪ್‌ ಡೌನ್‌ಲೋಡ್ ಮಾಡಿಕೊಳ್ಳಬೇಕು.

ತಂತ್ರಾಂಶದಲ್ಲಿ ಅಡಕವಾಗಿರುವ ಮಾಹಿತಿಯನ್ನು ಪರಿಶೀಲಿಸಿಕೊಳ್ಳಬೇಕು. ನಮೂದಾಗಿರುವ ಮಾಹಿತಿಯಲ್ಲಿ ತಿದ್ದುಪಡಿ ಇದ್ದಲ್ಲಿ ಅಗತ್ಯ ದಾಖಲೆಗಳೊಂದಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಪ್ರೌಢಶಾಲಾ ಮುಖ್ಯಶಿಕ್ಷಕರಿಗೆ ನ. 9ರ ಒಳಗೆ ಮನವಿ ಸಲ್ಲಿಸಿ ಸರಿಪಡಿಸಿಕೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ನಂಜಯ್ಯ ಮನವಿ ಮಾಡಿದ್ದಾರೆ.

ವರ್ಗಾವಣೆಗಾಗಿ ಆದ್ಯತೆ ಬಯಸುವವರು ನೇಮಕಾತಿ ಪ್ರಾಧಿಕಾರದಿಂದ ಸೇವಾ ದೃಢೀಕರಣ ಪತ್ರ ಹಾಗೂ ವೈದ್ಯಕೀಯ ಪ್ರಮಾಣ ಪತ್ರಗಳನ್ನು ಪ್ರಾಧಿಕಾರದಿಂದ ಪಡೆಯಬೇಕು. ವರ್ಗಾವಣೆ ಸಮಯದಲ್ಲಿ ಯಾವುದಾದರೂ ಗೊಂದಲಗಳು ಉಂಟಾದರೆ ಅದಕ್ಕೆ ನೀವೇ ನೇರ ಹೊಣೆಗಾರರಾಗಿರುತ್ತೀರಿ. ಇಲಾಖೆ ಹೊಣೆಯಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು