ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಂತ್ರಜ್ಞಾನದಿಂದ ಶಿಕ್ಷಣದಲ್ಲಿ ಪಾರದರ್ಶಕತೆ ವೃದ್ಧಿ

ಕಾರ್ಯಾಗಾರದಲ್ಲಿ ಸಿದ್ದೇಗೌಡ ಅಭಿಪ್ರಾಯ
Last Updated 5 ಏಪ್ರಿಲ್ 2019, 19:57 IST
ಅಕ್ಷರ ಗಾತ್ರ

ತುಮಕೂರು: ಮಾಹಿತಿ ಮತ್ತು ಸಂವಹನ ತಂತ್ರಜ್ಞಾನದಿಂದ ಉನ್ನತ ಶಿಕ್ಷಣದಲ್ಲಿ ವೇಗ ಮತ್ತು ಪಾರದರ್ಶಕತೆ ವೃದ್ಧಿಯಾಗುತ್ತದೆ ಎಂದು ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ ಅಭಿಪ್ರಾಯಪಟ್ಟರು.

ತುಮಕೂರು ವಿಶ್ವವಿದ್ಯಾನಿಲಯದ ಪರೀಕ್ಷಾಭವನದಲ್ಲಿ ವಿ.ವಿ.ಯ ಐಕ್ಯೂಎಸಿ, ಕೌಶಲಾಭಿವೃದ್ಧಿ ಘಟಕ ಹಾಗೂ ಭಾರತ ಸರ್ಕಾರ ದೂರಸಂಪರ್ಕ ಇಲಾಖೆ ಸಹಯೋಗದಲ್ಲಿ ವಿ.ವಿ.ಯ ವ್ಯಾಪ್ತಿಗೆ ಒಳಪಡುವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಪ್ರಾಧ್ಯಾಪಕರಿಗೆ ಏರ್ಪಡಿಸಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧಿಸುತ್ತಿರುವ ಪ್ರಗತಿಯಿಂದಾಗಿ ಬದಲಾವಣೆ ಸಹಜವಾಗಿದೆ. ಇಂತಹ ಅನಿವಾರ್ಯ ಸ್ಥಿತಿಗಳಲ್ಲಿ ಕಾಲೇಜು ಹಾಗೂ ವಿಶ್ವವಿದ್ಯಾನಿಲಯಗಳ ವಿದ್ಯಾರ್ಥಿಗಳಿಗೆ ಆಧುನಿಕ ಸ್ಪರ್ಧಾತ್ಮಕ ಜಗತ್ತನ್ನು ಎದುರಿಸುವ ಕೌಶಲಗಳನ್ನು ಬೋಧಿಸುವ ಕಾರ್ಯ ಮಾಡಬೇಕಿದೆ ಎಂದು ಹೇಳಿದರು.

ಕೇವಲ ಪಠ್ಯಕ್ಕೆ ಮಾತ್ರ ಸೀಮಿತವಾಗದೆ ಸರ್ವಾಂಗೀಣ ವ್ಯಕ್ತಿತ್ವ ರೂಪಿಸುವ ಕಾರ್ಯ ಮಾಡಬೇಕಾಗಿರುವುದು ಆದ್ಯ ಕರ್ತವ್ಯವಾಗಿದೆ ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ತಾನಿಯಾ ನಿಗಾರ್, ಕಾರ್ಯಾಗಾರದ ಸಂಘಟನಾ ಕಾರ್ಯದರ್ಶಿ ಪ್ರೊ.ಕೆ.ಜಿ.ಪರಶುರಾಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT