ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಳವೆ ಬಾವಿ ಕಾಮಗಾರಿ ಪರಿಶೀಲನೆ

Last Updated 7 ಏಪ್ರಿಲ್ 2019, 15:31 IST
ಅಕ್ಷರ ಗಾತ್ರ

ತುಮಕೂರು: ಗುಬ್ಬಿ ತಾಲ್ಲೂಕು ನಿಟ್ಟೂರು ಹೋಬಳಿಯ ನೋಡೆಲ್ ಅಧಿಕಾರಿ ಎಸ್.ನಟರಾಜ್ ಅವರು ಕೊಂಡ್ಲಿ ವ್ಯಾಪ್ತಿ ಮಾವಿನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಪ್ರಗತಿಯಲ್ಲಿರುವ ಕೊಳವೆಬಾವಿ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.

ನಂತರ ಮಾತನಾಡಿದ ಅವರು, ಪ್ರಸ್ತುತ ಗ್ರಾಮದಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆಯಿದ್ದು, ಟ್ಯಾಂಕರ್ ಮೂಲಕ ಕುಡಿಯುವ ನೀರಿನ ಪೂರೈಕೆಗಾಗಿ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.

ಈಗಾಗಲೇ ಕೊಳವೆಬಾವಿ ಕೊರೆಯಿಸಲಾಗಿದ್ದು, ಪೈಪ್‌ಲೈನ್ ಕಾಮಗಾರಿ ಪ್ರಗತಿಯಲ್ಲಿದೆ. ಕಾಮಗಾರಿಯನ್ನು 2‌ ದಿನಗಳೊಳಗೆ ಪೂರ್ಣಗೊಳಿಸಿ ಗ್ರಾಮಸ್ಥರಿಗೆ ನೀರಿನ ತೊಂದರೆಯಾಗದಂತೆ ಪೂರೈಕೆ ಮಾಡಲು ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ನಿರ್ದೇಶನ ನೀಡಿದರು.

ಕುಡಿಯುವ ನೀರಿಗಾಗಿ ಗ್ರಾಮ ಪಂಚಾಯಿತಿಯಿಂದ ತೆಗೆಸಿದ 3 ಕೊಳವೆ ಬಾವಿಗಳಲ್ಲಿ ಕೇವಲ 10ರಿಂದ 15 ಬಿಂದಿಗೆ ನೀರು ಬಂದು ನಿಂತು ಹೋಗುತ್ತಿದೆ ಎಂದು ಗ್ರಾಮಸ್ಥರು ತಿಳಿಸಿರುವುದರಿಂದ ಗ್ರಾಮದಿಂದ ಸುಮಾರು 2 ಕಿ.ಮೀ. ದೂರದಲ್ಲಿ ಕೊಳವೆ ಬಾವಿ ಕೊರೆಯಿಸಲಾಗಿದ್ದು, ಪೈಪ್‌ಲೈನ್ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.

ಅದೇರೀತಿ ದೊಡ್ಡಗುಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಂಡ್ಲಿಕ್ರಾಸ್‌ಗೆ ಭೇಟಿ ನೀಡಿ, ನೀರಿನ ಸಮಸ್ಯೆ ಇರುವ ಬಗ್ಗೆ ಪರಿಶೀಲಿಸಲಾಗಿದೆ. ನೀರಿನ ಸಮಸ್ಯೆ ಬಗೆಹರಿಯುವವರೆಗೆ ಈ ಗ್ರಾಮದ ಗ್ರಾಮಸ್ಥರಿಗೆ ಪ್ರತಿದಿನ ಟ್ಯಾಂಕರ್ ಮೂಲಕ ನೀರನ್ನು ಒದಗಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಗುಬ್ಬಿ ತಾಲ್ಲೂಕು ತಹಶೀಲ್ದಾರ್‌, ಕಾರ್ಯನಿರ್ವಾಹಕ ಅಧಿಕಾರಿಗಳು, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT