ಶಿರಾ: ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವ ಮೂಲಕ ಅವರ ತೇಜೋವಧೆ ಮಾಡಲು ಹೊರಟಿರುವುದು ಖಂಡನೀಯ ವಿಚಾರ ಎಂದು ಎಪಿಎಂಸಿ ಮಾಜಿ ಅಧ್ಯಕ್ಷ ಎಂ.ಆರ್.ಶಶಿಧರ್ ಗೌಡ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕ ಜಿ.ಎಸ್.ರವಿ ಹೇಳಿದರು.
ಧರ್ಮಸ್ಥಳದ ಬಗ್ಗೆ ಜನರಿಗೆ ವಿಶೇಷವಾದ ಭಕ್ತಿ ಮತ್ತು ಗೌರವವಿದೆ. ಅದನ್ನು ಹಾಳು ಮಾಡುವ ಕೆಲಸವನ್ನು ಯಾರ ಮಾಡಬಾರದು ಎಂದು ಮಂಗಳವಾರ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರು ಯಾವುದೋ ಒಂದು ರಾಜಕೀಯ ಪಕ್ಷಕ್ಕೆ ಸೀಮಿತವಾಗಿಲ್ಲ. ಅವರು ರಾಜಕೀಯೇತರವಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದಾಗಿ ಮಹಿಳೆಯರು ಆರ್ಥಿಕವಾಗಿ ಸದೃಢವಾಗಲು ಕಾರಣವಾಗಿದ್ದು ಎಷ್ಟೋ ಕುಟುಂಬಗಳಿಗೆ ನೆರಳಾಗಿದ್ದಾರೆ. ಸರ್ಕಾರ ಮಾಡಲಾಗದೆ ಕೆಲಸವನ್ನು ಇವರು ಮಾಡುತ್ತಿರುವುದು ಶ್ಲಾಘನೀಯ ಎಂದರು.
ಯುವ ಕಾಂಗ್ರೆಸ್ ಅಧ್ಯಕ್ಷ ಮಹೇಂದ್ರ ಗೌಡ, ವಸಂತಕುಮಾರ್, ಎಲ್.ಎನ್.ರಾಜು, ರವಿಕುಮಾರ್, ಪ್ರದೀಪ್ ಕುಮಾರ್, ರಾಮಾಂಜಿಗೌಡ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.