ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವೈದ್ಯರಿಗೆ ಕಾದ ರೋಗಿಗಳು

Published 9 ಜುಲೈ 2024, 5:46 IST
Last Updated 9 ಜುಲೈ 2024, 5:46 IST
ಅಕ್ಷರ ಗಾತ್ರ

ಕುಣಿಗಲ್: ತಾಲ್ಲೂಕಿನ ಚೌಡನಕುಪ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೋಮವಾರ ವೈದ್ಯರು ಸಕಾಲಕ್ಕೆ ಬಾರದ ಕಾರಣ ರೋಗಿಗಳು ವೈದ್ಯರಿಗೆ ಕಾಯುವಂತಾಯಿತು. 

ಸೋಮವಾರ ಬೆಳಗ್ಗೆ ಹಲವಾರು ರೋಗಿಗಳು ಚಿಕಿತ್ಸೆಗಾಗಿ ಚೌಡನಕುಪ್ಪೆ ಪ್ರಾಥಮಿಕ ಆರೋಗ್ಯಕ್ಕೆ ಚಿಕಿತ್ಸೆಗಾಗಿ ಬಂದಿದ್ದಾರೆ. 11 ಗಂಟೆಯಾದರೂ ವೈದ್ಯರು ಬಾರದ ಕಾರಣ ಬೇಸತ್ತ ಗ್ರಾಮಸ್ಥರು ತಾಲ್ಲೂಕು ಆರೋಗ್ಯಾಧಿಕಾರಿ ಮರಿಯಪ್ಪ ಅವರ ಗಮನಕ್ಕೆ ತಂದಿದ್ದಾರೆ. ನಂತರ ಸಿಬ್ಬಂದಿಯೊಬ್ಬರನ್ನು ನಿಯೋಜಿಸಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಯಿತು.

ಚೌಡನಕುಪ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರ ತಾಲ್ಲೂಕಿನ ಗಡಿಭಾಗದಲ್ಲಿದೆ. ಸುತ್ತಮುತ್ತಲಿನ ಗ್ರಾಮಸ್ಥರು ಈ ಕೇಂದ್ರವನ್ನೆ ಅವಲಂಬಿಸಿದ್ದಾರೆ. ಸಮೀಪದಲ್ಲಿ ಅಂಕನಹಳ್ಳಿ ಮಠದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವಿದ್ದು ಬಸ್ ಸೌಕರ್ಯ ಇಲ್ಲ. ಕಳೆದ ತಿಂಗಳು ವಿದ್ಯುತ್ ಪ್ರವಹಿಸಿ ವ್ಯಕ್ತಿಯೊಬ್ಬರು ಸಕಾಲಕ್ಕೆ ಚಿಕಿತ್ಸೆ ದೊರೆಯದೆ ಮೃತಪಟ್ಟ ಸಮಯದಲ್ಲೂ ವೈದ್ಯರು ಬಂದಿರಲಿಲ್ಲ. ಗ್ರಾಮಸ್ಥರು ಪ್ರತಿಭಟನೆ ನಡೆಸಿದಾಗ ತಾಲ್ಲೂಕು ಆರೋಗ್ಯಾಧಿಕಾರಿ ಭೇಟಿ ನೀಡಿ ಗಮನ ಹರಿಸುವುದಾಗಿ ತಿಳಿಸಿದ್ದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು.

ವೈದ್ಯರು ಮತ್ತು ಡಿ.ಗ್ರೂಪ್ ನೌಕರ ಇಬ್ಬರೂ ಅನಾರೋಗ್ಯದಿಂದ ಬಳಲುತ್ತಿದ್ದು, ಗ್ರಾಮಸ್ಥರ ಮನವಿ ಮೇರೆಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ವೈದ್ಯರು ಮತ್ತು ಗ್ರಾಮಸ್ಥರ ನಡುವೆ ಸಮನ್ವಯತೆ ಕೊರತೆ ಕಾರಣ ಸಮಸ್ಯೆಯಾಗುತ್ತಿದೆ. ಗ್ರಾಮಸ್ಥರು ದೂರು ನೀಡಿದರೆ ವೈದ್ಯರ ಬದಲಾವಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಮರಿಯಪ್ಪ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT