ಗುರುವಾರ, 10 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತುಮಕೂರು: ನಗರದಲ್ಲಿ 12 ಹೊಸ ಮತಗಟ್ಟೆ

ಜಿಲ್ಲೆಯಲ್ಲಿ 7 ಮತಗಟ್ಟೆಗಳ ಸ್ಥಳಾಂತರಕ್ಕೆ ಪ್ರಸ್ತಾವ
Published : 24 ಸೆಪ್ಟೆಂಬರ್ 2024, 3:55 IST
Last Updated : 24 ಸೆಪ್ಟೆಂಬರ್ 2024, 3:55 IST
ಫಾಲೋ ಮಾಡಿ
Comments

ತುಮಕೂರು: ನಗರ ವಿಧಾನಸಭಾ ಕ್ಷೇತ್ರದಲ್ಲಿ ಹೊಸದಾಗಿ 12 ಮತಗಟ್ಟೆ ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಈ ಸಂಬಂಧ ರಾಜ್ಯ ಚುನಾವಣಾ ಆಯೋಗಕ್ಕೆ ಪ್ರಸ್ತಾವ ಸಲ್ಲಿಸಲಾಗುತ್ತಿದೆ.

ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂಬಂಧ ಸೋಮವಾರ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಅಧಿಕಾರಿಗಳ ಸಭೆ ನಡೆಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ಈ ವಿಷಯ ತಿಳಿಸಿದರು.

ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2 ಕಿ.ಮೀ ಗಿಂತ ಹೆಚ್ಚು ದೂರವಿರುವ ಮತಗಟ್ಟೆ, 1,500ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಹೊಸದಾಗಿ ಮತಗಟ್ಟೆ ಸ್ಥಾಪಿಸಲು ಆಯೋಗಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು ಎಂದರು.

7 ಕಡೆ ಸ್ಥಳಾಂತರ: ಶಿಥಿಲವಾಗಿರುವ ಕಟ್ಟಡ, ಮೂಲಭೂತ ಸೌಕರ್ಯಗಳಿಲ್ಲದ ತಿಪಟೂರು ವಿಧಾನಸಭಾ ಕ್ಷೇತ್ರದಲ್ಲಿ 2, ತುಮಕೂರು ನಗರ ಕ್ಷೇತ್ರದಲ್ಲಿ 4, ಮಧುಗಿರಿ ಕ್ಷೇತ್ರದಲ್ಲಿ 1 ಸೇರಿದಂತೆ ಒಟ್ಟು 7 ಮತಗಟ್ಟೆ ಸ್ಥಳಾಂತರಿಸಲು ಆಯೋಗಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಹೇಳಿದರು.

1-1-2025ನ್ನು ಅರ್ಹತಾ ದಿನಾಂಕವನ್ನಾಗಿ ಪರಿಗಣಿಸಿ ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆ ಹಾಗೂ ಪರಿಷ್ಕರಣೆ ಕಾರ್ಯ ನಡೆಸಲಾಗಿದೆ. ಕರಡು ಮತದಾರರ ಪಟ್ಟಿಯನ್ನು ಅ. 29ರಂದು ಪ್ರಕಟಿಸಲಾಗುವುದು. ನ. 28ರ ವರೆಗೂ ಆಕ್ಷೇಪಣೆ ಸಲ್ಲಿಸಬಹುದು. ಜನವರಿ 6ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ತಿಳಿಸಿದರು.

ಚುನಾವಣಾ ತಹಶೀಲ್ದಾರ್ ರೇಷ್ಮ, ಮಹಾನಗರ ಪಾಲಿಕೆ ಉಪ ಆಯುಕ್ತ (ಆಡಳಿತ) ಗಿರೀಶ್, ಉಪ ಆಯುಕ್ತ (ಕಂದಾಯ) ರುದ್ರಮುನಿ, ತಿಪಟೂರು ತಹಶೀಲ್ದಾರ್ ಎನ್.ಪವನ್ ಕುಮಾರ್, ಮಧುಗಿರಿ ತಹಶೀಲ್ದಾರ್ ಶಿರಿನ್ ತಾಜ್ ಹಾಜರಿದ್ದರು.

ಹೊಸ ಮತಗಟ್ಟೆ ವಿವರ

ತುಮಕೂರು: ನಗರದ ಎಸ್.ಎನ್.ಪಾಳ್ಯದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆ (ಮತಗಟ್ಟೆ ಸಂಖ್ಯೆ-4ಎ) 1500ಕ್ಕೂ ಹೆಚ್ಚು ಮತದಾರರಿರುವ ಅಂತರಸನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ (ಮತಗಟ್ಟೆ-9ಎ) ಶಿರಾಗೇಟ್ ಉತ್ತರ ಬಡಾವಣೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆ (ಮತಗಟ್ಟೆ–13ಎ) ಅಗ್ರಹಾರ ಶಿಶುವಿಹಾರ ಆವರಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆ (30ಎ). ಗಾಂಧಿನಗರದ ವಿದ್ಯೋದಯ ಕಾನೂನು ಕಾಲೇಜು (73ಎ) ಚಾಂದನಿ ಚೌಕ ಭಾರತ ಮಾತಾ ಆಂಗ್ಲ ಹಿರಿಯ ಪ್ರಾಥಮಿಕ ಪಾಠಶಾಲೆ (83ಎ) ಭೈರವೇಶ್ವರ ಪದವಿ ಪೂರ್ವ ಕಾಲೇಜು (122ಎ) ಉಪ್ಪಾರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ (158ಎ) ಸರಸ್ವತಿಪುರಂ ವಿದ್ಯಾನಿಕೇತನ ಹಿರಿಯ ಪ್ರಾಥಮಿಕ ಪಾಠಶಾಲೆ (160ಎ) ಮರಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ (164ಎ) ಮರಳೂರು ಮಾವಿನತೋಪು ಅಂಕಿತ ಕಿರಿಯ ಪ್ರಾಥಮಿಕ ಪಾಠಶಾಲೆ (165ಎ) ಬಡ್ಡಿಹಳ್ಳಿ ಎಸ್ಆರ್‌ಎಸ್ ಹಿರಿಯ ಪ್ರಾಥಮಿಕ ಪಾಠಶಾಲೆ (220ಎ).

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT