ತುಮಕೂರು: ತಾಲ್ಲೂಕಿನ ಬೆಳಧರ ಬಳಿ ಶನಿವಾರ ಸಂಜೆ ಖಾಸಗಿ ಬಸ್ ಮತ್ತು ಕಾರಿನ ಮಧ್ಯೆ ನಡೆದ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದು, ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ.

ಕೊರಟಗೆರೆ ತಾಲ್ಲೂಕಿನ ಕತ್ತಿನಾಗೇನಹಳ್ಳಿಯ ಶಿವಕುಮಾರ್ (28), ಗೋವಿಂದಪ್ಪ (60), ಬೈಚಾಪುರದ ಶಿವಶಂಕರ್ (28) ಮೃತರು. ಕತ್ತಿನಾಗೇನಹಳ್ಳಿಯ ಗೋಪಾಲ್ (28), ರೆಡ್ಡಿಹಳ್ಳಿಯ ಶಂಕರ್ (28) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲರು ಧರ್ಮಸ್ಥಳಕ್ಕೆ ಹೊರಟಿದ್ದರು. ಮಾರ್ಗ ಮಧ್ಯೆ ಅಪಘಾತ ಸಂಭವಿಸಿದೆ.

ನಗರದಿಂದ ಮಧುಗಿರಿ ಕಡೆಗೆ ಹೊರಟಿದ್ದ ಬಸ್ ಮತ್ತು ಕೊರಟಗೆರೆಯಿಂದ ನಗರದ ಕಡೆಗೆ ಬರುತ್ತಿದ್ದ ಕಾರು ಮುಖಾಮುಖಿಯಾಗಿದೆ. ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಗೋವಿಂದಪ್ಪ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.

‘ಓವರ್ ಟೇಕ್ ಮಾಡುವ ಭರದಲ್ಲಿ ಅಪಘಾತ ಸಂಭವಿಸಿದೆ. ಮೃತದೇಹಗಳನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.