ತುಮಕೂರು: ಸಮುದಾಯ ಒಗ್ಗೂಡಲು ಜಯಂತಿ ನೆರವಾಗುತ್ತದೆ. ಗ್ರಾಮೀಣ ಯುವಕರ ಪ್ರತಿಭೆ ಅನಾವರಣಕ್ಕೆ ವೇದಿಕೆ ಕಲ್ಪಿಸುತ್ತದೆ ಎಂದು ತಿಪಟೂರಿನ ಅಣಪನಹಳ್ಳಿ ಅಲ್ಬೂರು ಮಠದ ಸೋಮಶೇಖರ ಸ್ವಾಮೀಜಿ ಹೇಳಿದರು.

ನಗರದಲ್ಲಿ ಶನಿವಾರ ಜಿಲ್ಲಾ ಆಡಳಿತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅಗ್ನಿವಂಶ ಕ್ಷತ್ರಿಯ ತಿಗಳ ಜನಾಂಗದ ಎಲ್ಲಾ ಸಂಘ– ಸಂಸ್ಥೆಗಳ ಆಶ್ರಯದಲ್ಲಿ ಆಯೋಜಿಸಿದ್ದ ಅಗ್ನಿಬನ್ನಿರಾಯಸ್ವಾಮಿ ಜಯಂತಿ ಕಾರ್ಯಕ್ರಮ ದಲ್ಲಿ ಮಾತನಾಡಿದರು.

ಪ್ರಸ್ತುತ ಹಳ್ಳಿ–ಹಳ್ಳಿಯಲ್ಲೂ ಅಗ್ನಿಬನ್ನಿರಾಯಸ್ವಾಮಿ ಜಯಂತಿ ಆಚರಿಸಲಾಗುತ್ತಿದೆ. ಈ ಮೂಲಕ ಯುವಕರಲ್ಲಿ ಜಾಗೃತಿ ಮೂಡಿಸಲಾಗುತ್ತದೆ. ಇದು ಒಳ್ಳೆಯ ಬೆಳವಣಿಗೆ. ಸಾಂಸ್ಕೃತಿಕ ಕಲೆ ಪ್ರದರ್ಶನಕ್ಕೆ ಸಹಾಯವಾಗಲಿದೆ ಎಂದು ತಿಳಿಸಿದರು.

ಶಾಸಕ ಜಿ.ಬಿ.ಜ್ಯೋತಿಗಣೇಶ್, ‘ಸಮಾಜವನ್ನು ಒಗ್ಗೂಡಿಸಿಕೊಂಡು ಹೋಗಲು ಜಯಂತಿ ಕಾರಣವಾಗುತ್ತದೆ. ಹಣ, ಜಮೀನು ಮಾಡುವುದರಿಂದ ಸಮುದಾಯ ಅಭಿವೃದ್ಧಿ ಆಗುವುದಿಲ್ಲ. ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು. ಉನ್ನತ ವಿದ್ಯಾಭ್ಯಾಸಕ್ಕೆ ನೆರವಾಗಬೇಕು. ಸ್ಪರ್ಧಾತ್ಮಕ ಯುಗದ ಸ್ಪರ್ಧೆ ಎದುರಿಸಲು ತರಬೇತಿ ಕೇಂದ್ರ ಆರಂಭಿಸಬೇಕು. ಯುವ ಸಮೂಹಕ್ಕೆ ಶೈಕ್ಷಣಿಕವಾಗಿ ಮಾರ್ಗದರ್ಶನ ನೀಡಬೇಕು’ ಎಂದು ಸಲಹೆ ಮಾಡಿದರು.

ಸಮುದಾಯದ ಯುವಕರು ಎಲ್ಲ ರಂಗದಲ್ಲಿಯೂ ತೊಡಗಿಸಿಕೊಳ್ಳಬೇಕು. ಮತ್ತಷ್ಟು ಶಕ್ತಿಯುತವಾಗಿ ಸಮಾಜ ಕಟ್ಟಲು ಎಲ್ಲರು ಕೈಜೋಡಿಸಬೇಕು. ಸಮಾಜದ ಅಭಿವೃದ್ಧಿಗೆ ಅಗತ್ಯ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು.

ಕೋಟೆ ಆಂಜನೇಯಸ್ವಾಮಿ ದೇಗುಲ ಮುಂಭಾಗದಿಂದ ಕೋಟೆ ಕೊಲ್ಲಾಪುರದಮ್ಮ ಸಮುದಾಯ ಭವನದ ವರೆಗೆ ಅಗ್ನಿಬನ್ನಿರಾಯಸ್ವಾಮಿ ಭಾವಚಿತ್ರದ ಮೆರವಣಿಗೆ ನಡೆಯಿತು.

ತಹಶೀಲ್ದಾರ್ ಪಿ.ಎಸ್.ರಾಜೇಶ್ವರಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ, ಯಜಮಾನರಾದ ಹನುಮಂತರಾಜು, ಶಿವಕುಮಾರ್, ಮಂಜುನಾಥ್, ಮಂಜಣ್ಣ, ಮುಖಂಡರಾದ ಟಿ.ಕೆ.ನರಸಿಂಹಮೂರ್ತಿ, ಎ.ಶ್ರೀನಿವಾಸ್, ಟಿ.ಎಲ್.ಕುಂಭಯ್ಯ, ರೇವಣಸಿದ್ದಯ್ಯ, ರವೀಶ್ ಜಹಾಂಗೀರ್, ಮರಿಗಂಗಯ್ಯ, ಮಂಜುನಾಥ್, ಸಿ.ನಂಜಯ್ಯ, ಆಂಜನೇಯ, ರಾಜಣ್ಣ, ಟಿ.ಎಚ್.ಕೃಷ್ಣಪ್ಪ, ಅಣೆತೋಟ ಶ್ರೀನಿವಾಸ್, ಶಿವಗಂಗಮ್ಮ ಮೊದಲಾದವರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-17-2064316473

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.