ತುಮಕೂರು: ಕಾರ್ಮಿಕರು ಬಂಡವಾಳಶಾಹಿ ವ್ಯವಸ್ಥೆ ಕೊನೆಗಾಣಿಸಿ, ಸಮ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು ಎಐಯುಟಿಯುಸಿ ರಾಜ್ಯ ಉಪಾಧ್ಯಕ್ಷ ಬಿ.ಅಮ್ಜದ್ ಹೇಳಿದರು.

ನಗರದಲ್ಲಿ ಶುಕ್ರವಾರ ಎಐಟಿಯುಸಿ, ಎಐಯುಟಿಯುಸಿ ಸಂಘಟನೆಗಳಿಂದ ಆಯೋಜಿಸಿದ್ದ ಅಂತರರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೈಗಾರಿಕಾ ಕ್ರಾಂತಿ ನಂತರ ಕಾರ್ಮಿಕರು ಮತ್ತು ಮಾಲೀಕರ ಮಧ್ಯೆ ಹೋರಾಟ, ಶೋಷಣೆ ಶುರುವಾಯಿತು. ಪ್ರಸ್ತುತ ಕಾರ್ಮಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ನೂತನ ಕಾರ್ಮಿಕ ಸಂಹಿತೆ ಕಾರ್ಮಿಕರ ಕೆಲಸದ ಅವಧಿಯನ್ನು 12 ಗಂಟೆಗೆ ಹೆಚ್ಚಿಸಿದೆ. ಇದರ ವಿರುದ್ಧ ಹೋರಾಟ ರೂಪಿಸಬೇಕು ಎಂದು ಕರೆ ನೀಡಿದರು.

ಎಐಟಿಯುಸಿ ರಾಜ್ಯ ಉಪಾಧ್ಯಕ್ಷ ಗಿರೀಶ್, ‘ಕಾರ್ಮಿಕರು ಅತ್ಯಂತ ಕಡಿಮೆ ವೇತನದಲ್ಲಿ ಬದುಕುತ್ತಿದ್ದಾರೆ. ಆಳುವ ವರ್ಗ ತನಗೆ ಬೇಕಾದ ಕಾನೂನು ರೂಪಿಸುತ್ತಿದೆ. ಕೇಂದ್ರ, ರಾಜ್ಯ ಸರ್ಕಾರಗಳು ಬೆಲೆ ಏರಿಕೆಗೆ ಕಡಿವಾಣ ಹಾಕುತ್ತಿಲ್ಲ. ಕಾರ್ಮಿಕರು ಇದನ್ನು ಅರಿತು ಕೆಲಸ ಮಾಡಬೇಕು. ಸಾಮ್ರಾಜ್ಯಶಾಹಿ ಶಕ್ತಿ ಸೋಲಿಸಿ, ಸಮ ಸಮಾಜ ಕಟ್ಟಬೇಕು’ ಎಂದರು.

ಸ್ವಾತಂತ್ರ್ಯ ಚೌಕದಿಂದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ತನಕ ಮೆರವಣಿಗೆನಡೆಯಿತು. ಎಐಟಿಯುಸಿ ಜಿಲ್ಲಾ ಅಧ್ಯಕ್ಷ ಕಂಬೇಗೌಡ, ಎಐಯುಟಿಯುಸಿ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಜಿ.ಹನುಮೇಶ, ಜಿಲ್ಲಾ ಸಂಚಾಲಕಿ ಮಂಜುಳಾ ಗೋನವಾರ, ಸ್ವಾತಂತ್ರ್ಯ ಹೋರಾಟಗಾರ ಟಿ.ಆರ್.ರೇವಣ್ಣ, ಮುಖಂಡರಾದ ಚಂದ್ರಶೇಖರ್, ಅಶ್ವತ್ಥ ನಾರಾಯಣ್, ರೇಖಾ, ಶಾರದಮ್ಮ, ಸುನಂದಾ, ವಿದ್ಯಾ, ಲಕ್ಷ್ಮಿದೇವಿ, ಮುದ್ದಮ್ಮ ಇತರರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-17-205774501

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.