ತುಮಕೂರು: ಬಿ.ಆರ್.ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ನಗರದ ಅಮಾನಿಕೆರೆಯಲ್ಲಿ ಮಂಗಳವಾರ ಆಯೋಜಿಸಿದ್ದ ಬೋಟ್ ಪೆರೇಡ್ ನೋಡುಗರ ಗಮನ ಸೆಳೆಯಿತು.

ವಿದ್ಯುತ್ ದೀಪಗಳಿಂದ ಸಿಂಗಾರಗೊಂಡಿದ್ದ ದೋಣಿಗಳು ಕತ್ತಲೆಯಲ್ಲಿ ಕೆರೆಯಲ್ಲಿ ತೇಲುತ್ತಾ ಸಾಗುತ್ತಿದ್ದ ದೃಶ್ಯ ವೀಕ್ಷಕರ ಮನಸೂರೆಗೊಳಿಸಿತು. ಕೆರೆಯಲ್ಲಿನ ಸೇತುವೆಯನ್ನು ವಿದ್ಯುತ್ ದೀಪಗಳಿಂದ ಅಲಂಕಾರಗೊಳಿಸಲಾಗಿತ್ತು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕೆರೆ ಬಳಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿತ್ತು.

ಇದೇ ಮೊದಲ ಬಾರಿಗೆ ಏರ್ಪಡಿಸಿದ್ದ ವಿಶೇಷ ಕಾರ್ಯಕ್ರಮಕ್ಕೆ ಜನರಿಂದ ಉತ್ತಮ ಸ್ಪಂದನೆ ದೊರೆಯಿತು. ಸಾರ್ವಜನಿಕರು ಉಚಿತವಾಗಿ ಅಮಾನಿಕೆರೆಗೆ ಭೇಟಿ ನೀಡಲು ಅವಕಾಶ ಕಲ್ಪಿಸಿದ್ದರಿಂದ ಹೆಚ್ಚಿನ ಜನ ಸೇರಿದ್ದರು. ಸಂಜೆ 6 ಗಂಟೆಯಿಂದಲೇ ಅಮಾನಿಕೆರೆ ಕಡೆಗೆ ಹೆಜ್ಜೆ ಹಾಕಿದರು. ಪೆರೇಡ್ ನಂತರ ಧ್ವನಿ ಹಾಗೂ ಬೆಳಕು ಪ್ರದರ್ಶನ, ಸಂಗೀತ ಕಾರಂಜಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಪೆರೇಡ್ಗೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಚಾಲನೆ ನೀಡಿದರು. ಶಾಸಕರಾದ ಬಿ.ಸುರೇಶ್ಗೌಡ, ಜಿ.ಬಿ.ಜ್ಯೋತಿಗಣೇಶ್ ಮೊದಲಾದವರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-17-291591224

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.