ತುಮಕೂರು: ನಗರದ ಅಮಾನಿಕೆರೆಗೆ ಕಲುಷಿತ ನೀರು ಹರಿಯುತ್ತಿದ್ದು, ತಕ್ಷಣ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಜಿಲ್ಲಾ ಮಟ್ಟದ ಅಫೆಕ್ಸ್ ಸಮಿತಿ ಸಭೆ ನಡೆಸಿ ಮಾತನಾಡಿದರು.

ಗ್ರಾಮೀಣಾಭಿವೃದ್ಧಿ, ಸಣ್ಣ ನೀರಾವರಿ ಸೇರಿದಂತೆ ವಿವಿಧ ಇಲಾಖೆ ವ್ಯಾಪ್ತಿಯ ಒಟ್ಟು 2,047 ಕೆರೆಗಳ ಸ್ಥಿತಿಗತಿ ಕುರಿತು ಸಮಗ್ರ ಪರಿಶೀಲನೆ ನಡೆಸಿದರು. ಕೆರೆಗಳ ಸರ್ವೇ ಪ್ರಗತಿ, ಸರ್ವೇ ಬಾಕಿ, ಒತ್ತುವರಿ ಪ್ರದೇಶ ಗುರುತಿಸುವಿಕೆ, ತೆರವು ಕಾರ್ಯಾಚರಣೆ ಕುರಿತು ಮಾಹಿತಿ ಪಡೆದರು.

ಈಗಾಗಲೇ ಗುರುತಿಸಿರುವ ಒತ್ತುವರಿ ತೆರವುಗೊಳಿಸಿ ಕೆರೆಗಳನ್ನು ಆಯಾ ಇಲಾಖೆಯ ವಶಕ್ಕೆ ಪಡೆದು ಸಂರಕ್ಷಿಸಬೇಕು. ಕೆರೆಗಳಿಗೆ ರಾಸಾಯನಿಕ ತ್ಯಾಜ್ಯ, ಮಲಿನ ನೀರು ಹಾಗೂ ಇತರೆ ಮಾಲಿನ್ಯಕಾರಿ ಅಂಶಗಳು ಸೇರುವುದನ್ನು ತಡೆಯಬೇಕು. ಕುಡಿಯುವ ನೀರಿನ ಮೂಲಗಳ ರಕ್ಷಣೆ, ನೀರಿನ ಗುಣಮಟ್ಟ ಕಾಪಾಡುವ ವಿಚಾರದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ನಿರ್ದೇಶಿಸಿದರು.

ಕೆರೆಯಿಂದ ರೈತರು ಹೊಲಗಳಿಗೆ ಮಣ್ಣು ಸಾಗಣೆ ಮಾಡುವಾಗ ಪ್ರಸ್ತುತ ಜಾರಿಯಲ್ಲಿರುವ ನಿಯಮ ಪಾಲಿಸಬೇಕು. ಕೆರೆ ಅಭಿವೃದ್ಧಿ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆದು ಸಂಬಂಧಿತ ಇಲಾಖೆಗಳು ಕ್ರಮ ವಹಿಸಬೇಕು ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಶಿಧರ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-17-1360261579

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.