ತುಮಕೂರು: ಬಕ್ರೀದ್ ಪ್ರಯುಕ್ತ ನಗರದಲ್ಲಿ ಸೋಮವಾರ ಜಿಲ್ಲಾ ಆಡಳಿತದಿಂದ ಶಾಂತಿ ಸಭೆ ಆಯೋಜಿಸಲಾಗಿತ್ತು. ಮೇ 28ರಂದು ಹಬ್ಬ ಆಚರಿಸುತ್ತಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.

‘ಹಬ್ಬದ ವೇಳೆ ಗೋವು ಸಾಗಣೆ ಸಂಬಂಧ ತೆಗೆದುಕೊಳ್ಳಬೇಕಾದ ಕಾನೂನು ಕ್ರಮಗಳ ಕುರಿತು ಸಭೆಯಲ್ಲಿ ತಿಳಿಸಲಾಗಿದೆ. ಯಾರೂ ನೈತಿಕ ಪೊಲೀಸ್ ಗಿರಿ ಮಾಡುವಂತಿಲ್ಲ. ಸಣ್ಣ ಮಾಹಿತಿ ಸಿಕ್ಕರೂ ಸ್ಥಳೀಯ ಠಾಣೆಯ ಪೊಲೀಸರಿಗೆ ತಿಳಿಸಬೇಕು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಹೇಳಿದರು.

ಸಭೆ ನಂತರ ಸುದ್ದಿಗಾರರ ಜತೆಗೆ ಮಾತನಾಡಿ, ‘ಶಾಂತಿ, ಸೌಹಾರ್ದತೆ ಕಾಪಾಡಬೇಕು. ಹಬ್ಬದ ಸಮಯದಲ್ಲಿ ಜಲಾಶಯ, ಕೆರೆ–ಕಟ್ಟೆ, ಕೆನಾಲ್ ಬಳಿ ಹೋಗುವವರು ಎಚ್ಚರಿಕೆ ವಹಿಸಬೇಕು. ಯಾರೂ ಕಾನೂನು ಕೈಗೆತ್ತಿಕೊಳ್ಳುವುದು ಬೇಡ. ಸಾಮಾಜಿಕ ಜಾಲ ತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಂಚಿಕೊಂಡರೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಲ್.ಪುರುಷೋತ್ತಮ ಇತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-17-262018460

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.