ಬಂಜಾರ ಭವನ ಉದ್ಘಾಟನಾ ಸಮಾರಂಭದಲ್ಲಿ ಸಂವಿಧಾನ ಪ್ರಸ್ತಾವನೆ ಬೋಧಿಸಲಾಯಿತು
ಸರ್ಕಾರ ಬಂಜಾರರು ಸೇರಿದಂತೆ ಎಲ್ಲ ಸಮುದಾಯಕ್ಕೆ ಹಾಸ್ಟೆಲ್ ನಿರ್ಮಿಸಬೇಕು. ಮಕ್ಕಳಿಗೆ ಶೈಕ್ಷಣಿಕವಾಗಿ ಶಕ್ತಿ ನೀಡಬೇಕು. ಸಮುದಾಯದ ಜನ ಹೆಚ್ಚಿರುವ ಕ್ಷೇತ್ರಕ್ಕೆ ಅನುದಾನ ನೀಡಬೇಕು.
– ಸಿ.ಬಿ.ಸುರೇಶ್ ಬಾಬು, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ
ರಾಜ್ಯದಲ್ಲಿ 4 ಸಾವಿರಕ್ಕೂ ಹೆಚ್ಚು ತಾಂಡಾಗಳಿವೆ. ಇಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಎದುರಾಗಿದೆ. ಮಹಿಳೆಯರು ಐದಾರು ಕಿ.ಮೀ ನಡೆದುಕೊಂಡು ಹೋಗಿ ನೀರು ತರಬೇಕಾದ ಪರಿಸ್ಥಿತಿ ಇದೆ. ರಸ್ತೆ ಚರಂಡಿ ಸಂಪರ್ಕ ಕಲ್ಪಿಸಿಲ್ಲ. ತಾಂಡಾಗಳ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಅಗತ್ಯ ಹಣಕಾಸಿನ ನೆರವು ಒದಗಿಸಬೇಕು.