ತಿಪಟೂರು: ತುಮಕೂರು ಜಿಲ್ಲೆಯನ್ನು ‘ಬೆಂಗಳೂರು ಉತ್ತರ’ ಜಿಲ್ಲೆ ಮಾಡಿ ಗ್ರೇಟರ್ ಬೆಂಗಳೂರಿಗೆ ಸೇರಿಸಲು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಮುಖ್ಯಮಂತ್ರಿಗೆ ಮನವಿ ಮಾಡಿರುವುದು ಹಾಸ್ಯಾಸ್ಪದ. ಇದಕ್ಕೆ ಸಂಪೂರ್ಣ ವಿರೋಧವಿದೆ ಎಂದು ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು ಜಿಲ್ಲೆ ತನ್ನದೇ ಆದ ಇತಿಹಾಸ ಹಾಗೂ ಬೌಗೋಳಿಕ ಮಹತ್ವ ಹೊಂದಿದೆ. ಶೈಕ್ಷಣಿಕ, ಸಾಮಾಜಿಕವಾಗಿ ವಿಶೇಷ ಸ್ಥಾನ ಪಡೆದಿದೆ. ಜನರ ಅಭಿಪ್ರಾಯ ಪಡೆಯದೆ, ಇದಕ್ಕೆ ಮನವಿ ಮಾಡಿರುವುದು ತಪ್ಪು ಎಂದರು.

ಸಿದ್ಧಗಂಗಾ ಮಠ ದೇಶದಲ್ಲಿಯೇ ಪ್ರಸಿದ್ಧಿ ಹೊಂದಿದೆ. ಕೊಬ್ಬರಿ ಬೆಳೆಯುವ ಜಿಲ್ಲೆ. ಇಲ್ಲಿನ ಕೊಬ್ಬರಿಗೆ ಭೌಗೋಳಿಕ ಮಾನ್ಯತೆ ಪಡೆದುಕೊಳ್ಳುವುದರಲ್ಲಿದೆ. ಇದೆಲ್ಲವನ್ನೂ ಮರೆತು ತುಮಕೂರನ್ನು ಬೆಂಗಳೂರಿಗೆ ಸೇರಿಸಲು ಪ್ರಸ್ತಾಪ ಮಾಡಿರುವುದು ಎಷ್ಟರಮಟ್ಟಿಗೆ ಸರಿ? ಅದರ ಬದಲು ತಿಪಟೂರು ಜಿಲ್ಲೆ ಮಾಡಿದರೆ ಜನರಿಗೆ ಹೆಚ್ಚು ಅನುಕೂಲ. ಇನ್ನೊಂದು ವರ್ಷದಲ್ಲಿ ಚುನಾವಣಾ ಕೆಲಸ ಪ್ರಾರಂಭವಾಗುವುದರಿಂದ ಶಾಸಕರು ಇದರ ಬಗ್ಗೆ ಕೇವಲ ಹೇಳಿಕೆ ನೀಡುವುದು ಬಿಟ್ಟು ಮುಖ್ಯಮಂತ್ರಿಗೆ ಒತ್ತಡ ತಂದು ತಿಪಟೂರನ್ನು ಜಿಲ್ಲಾ ಘೋಷಣೆ ಮಾಡಿಸಬೇಕು ಎಂದು ಆಗ್ರಹಿಸಿದರು.

ಸರಕಾರದ ಅಭಿವೃದ್ಧಿ ಶೂನ್ಯವಾಗಿದ್ದು ಸಾಧನಾ ಸಮಾವೇಶ ಅವಶ್ಯಕತೆ ಇರಲಿಲ್ಲ. ಯಾವ ನೈತಿಕತೆ ಇಟ್ಟುಕೊಂಡು ಸಮಾವೇಶ ಮಾಡಿದ್ದಾರೊ ತಿಳಿಯದು. ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು ಹಾಗೂ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಅತ್ಯವಶ್ಯಕ. ಒಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಅಗತ್ಯ ಇದೆ. ₹250 ಕೋಟಿ ವೆಚ್ಚದಲ್ಲಿ ಕಲ್ಪತರು ನಾಡಿನಲ್ಲಿ ತೆಂಗು ಸಂಶೋಧನಾ ಕೇಂದ್ರ ಪ್ರಾರಂಭಿಸುವುದಾಗಿ ಹೇಳಿಕೆ ಕೊಟ್ಟಿದ್ದು ಇನ್ನೂ ಈಡೇರಿಲ್ಲ. ಬಜೆಟ್ ಪೂರ್ವದಲ್ಲಿಯೇ ಇದನ್ನು ಘೋಷಿಸಿದ್ದರೂ ಇನ್ನೂ ಈಡೇರಿಲ್ಲ. ಈ ಬಗ್ಗೆ ಜನಪ್ರತಿನಿಧಿಗಳು ಗಮನಹರಿಸಬೇಕು ಎಂದು ಆಗ್ರಹಿಸಿದರು.

ಜೆಡಿಎಸ್ ಜಿಲ್ಲಾ ಕಾರ್ಯದರ್ಶಿ ಶಿವಸ್ವಾಮಿ, ನಗರಾಧ್ಯಕ್ಷ ರಾಜು ಕಂಚಾಘಟ್ಟ ಹಾಗೂ ಸುದರ್ಶನ್, ಸಂತೋಷ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-17-331260724

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.