ತಿಪಟೂರು: ಭಾರತೀಯ ಜನತಾ ಪಾರ್ಟಿಯ ತುಮಕೂರು ಜಿಲ್ಲಾ ಘಟಕದ ವಿವಿಧ ಮೋರ್ಚಾಗಳಿಗೆ ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಅಧ್ಯಕ್ಷ ಎಚ್.ಎಸ್. ರವಿಶಂಕರ್ ತಿಳಿಸಿದರು.

ತಿಪಟೂರು ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶಶಿಕಿರಣ್ ಅವರನ್ನು ತುಮಕೂರು ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದ್ದು, ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ತಿಪಟೂರು ನಗರಸಭೆ ಮಾಜಿ ಅಧ್ಯಕ್ಷ ರಾಮ್ಮೋಹನ್ ಅವರನ್ನು ನೇಮಕ ಮಾಡಲಾಗಿದೆ.

ಪರಿಶಿಷ್ಟ ಪಂಗಡ ಮೋರ್ಚಾದ ಜಿಲ್ಲಾ ಅಧ್ಯಕ್ಷರಾಗಿ ಸೂಗೂರು ದಿಲೀಪ್ ನೇಮಕಗೊಂಡಿದ್ದಾರೆ. ರೈತ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಈಚನೂರಿನ ಗಿರೀಶ್, ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ನಗರಸಭೆ ಮಾಜಿ ಸದಸ್ಯೆ ಸಂಧ್ಯಾಕಿರಣ್, ಪರಿಶಿಷ್ಟ ಜಾತಿಯ ಪ್ರಧಾನ ಕಾರ್ಯದರ್ಶಿಯಾಗಿ ತಿಪಟೂರು ಅಶೋಕ್ ಅವರನ್ನು ನೇಮಕ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-17-2082669573

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.