ತುಮಕೂರು: ಕಾರ್ಮಿಕ ಇಲಾಖೆ ಅಧಿಕಾರಿಗಳು ನಿಯಮಿತವಾಗಿ ತಪಾಸಣೆ ನಡೆಸಿ ಬಾಲ ಕಾರ್ಮಿಕರನ್ನು ರಕ್ಷಿಸಿ, ಪುನರ್ವಸತಿ ಕಲ್ಪಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಕೆ.ಟಿ.ತಿಪ್ಪೇಸ್ವಾಮಿ ನಿರ್ದೇಶಿಸಿದರು.

ನಗರದ ಕಾರ್ಮಿಕ ಇಲಾಖೆ ಕಚೇರಿಯಲ್ಲಿ ಗುರುವಾರ ನಡೆದ ಮಕ್ಕಳು ಮತ್ತು ಹದಿಹರೆಯದವರ ಕಾರ್ಮಿಕ ಪದ್ಧತಿ (ನಿಷೇಧ ಹಾಗೂ ನಿಯಂತ್ರಣ) ಕಾಯ್ದೆ–1986ರ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ಯಾರೇಜ್, ಟೋಲ್, ಕಾರ್ಖಾನೆ, ಹೋಟೆಲ್, ಅಂಗಡಿ, ಮತ್ತಿತರ ಅಪಾಯಕಾರಿ ಉದ್ಯೋಗದ ಸ್ಥಳಗಳಲ್ಲಿ ತಪಾಸಣೆ ಹೆಚ್ಚಿಸಬೇಕು. ತಪಾಸಣೆ ತೀವ್ರವಾದರೆ ಬಾಲ ಕಾರ್ಮಿಕರನ್ನು ಕೆಲಸದಲ್ಲಿ ತೊಡಗಿಸಿಕೊಳ್ಳಲು ಉದ್ಯೋಗದಾತರು ಹೆದರುತ್ತಾರೆ. ಪತ್ತೆ ಹಚ್ಚಿದ ಬಾಲ ಕಾರ್ಮಿಕರಿಗೆ ಪುನರ್ವಸತಿ ಕಲ್ಪಿಸಿ ಮುಖ್ಯವಾಹಿನಿಗೆ ತಂದರೆ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಹೇಳಿದರು.

ಬಾಲ ಕಾರ್ಮಿಕರ ನಿಷೇಧ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದರೆ ಮಕ್ಕಳು ಬಾಲ ಕಾರ್ಮಿಕರಾಗುವುದನ್ನು ತಪ್ಪಿಸಬಹುದು. ಇಲ್ಲವಾದರೆ ಕೊನೆಯವರೆಗೂ ಕಾರ್ಮಿಕರಾಗಿಯೇ ಉಳಿದುಬಿಡುತ್ತಾರೆ ಎಂದು ಎಚ್ಚರಿಸಿದರು.

ಜಿಲ್ಲೆಯ 330 ಗ್ರಾಮ ಪಂಚಾಯಿತಿಗಳಲ್ಲಿ ಘನತ್ಯಾಜ್ಯ ವಿಲೇವಾರಿ ವಾಹನಗಳಲ್ಲಿ ಬಾಲ ಕಾರ್ಮಿಕರ ನಿಷೇಧ ಕಾಯ್ದೆ ಬಗ್ಗೆ ಧ್ವನಿ ಮುದ್ರಿಕೆಗಳನ್ನು ಅಳವಡಿಸಬೇಕು. ಇದರಿಂದ ಗ್ರಾಮ ಮಟ್ಟದಲ್ಲೂ ಬಾಲ ಕಾರ್ಮಿಕರ ನಿಷೇಧ ಕಾಯ್ದೆ ಕುರಿತು ಅರಿವು ಮೂಡಿಸಲು ಸಾಧ್ಯವಾಗಲಿದೆ ಎಂದರು.

ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ಹಾಸ್ಟೆಲ್ಗಳಲ್ಲಿ ಬಾಲಕಾರ್ಮಿಕ ಕಾಯ್ದೆ, ಬಾಲ್ಯ ವಿವಾಹ, ಪೋಕ್ಸೊ ಕಾಯ್ದೆ, ಕಾರ್ಮಿಕ ಇಲಾಖೆಯ ಯೋಜನೆಗಳ ಕುರಿತು ಅರಿವು ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ನಡೆಸುವಂತೆ ಸೂಚಿಸಿದರು.

ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ತ್ರೈಮಾಸಿಕ ಪ್ರಗತಿ ಪರಿಶೀಲನೆ ಸಭೆಯನ್ನು ನಿಯಮಿತವಾಗಿ ನಡೆಸಬೇಕು. ಕಾರ್ಮಿಕ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಕಾರ್ಮಿಕ ಇಲಾಖೆ ಅನುಷ್ಠಾನಗೊಳಿಸುತ್ತಿರುವ ಇ-ಶ್ರಮ್ ಯೋಜನೆಗೆ ಹೆಚ್ಚಿನ ಫಲಾನುಭವಿಗಳನ್ನು ನೋಂದಾಯಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪವಿತ್ರ, ಮಧುಗಿರಿ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಫೈರೋಜ್ ಪಾಷ, ತಾಲ್ಲೂಕು ಮಟ್ಟದ ಕಾರ್ಮಿಕ ನಿರೀಕ್ಷಕರು ಉಪಸ್ಥಿತರಿದ್ದರು.

8 ಬಾಲ ಕಾರ್ಮಿಕರು ಪತ್ತೆ

ಜಿಲ್ಲೆಯಲ್ಲಿ ಕಳೆದ ಏಪ್ರಿಲ್ ತಿಂಗಳಿನಿಂದ ಅಕ್ಟೋಬರ್ವರೆಗೆ 729 ಕಡೆಗಳಲ್ಲಿ ತಪಾಸಣೆ ನಡೆಸಲಾಗಿದ್ದು 8 ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸಲಾಗಿದೆ’ ಎಂದು ಕಾರ್ಮಿಕ ಅಧಿಕಾರಿ ಜಿ.ಇಬ್ರಾಹಿಂ ಸಾಬ್ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.